Latest

ನಿವೃತ್ತಿಯ ದಿನವೇ ಲೋಕಾಯುಕ್ತ ದಾಳಿ: ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್‌ ಬಳಿ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ..

ಧಾರವಾಡ: ಕರ್ತವ್ಯದಿಂದ ನಿವೃತ್ತಿಯಾಗುತ್ತಿದ್ದ ದಿನವೇ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯ ಉತ್ತರ ವಲಯದ ಮುಖ್ಯ ಇಂಜಿನಿಯರ್ ಎಚ್. ಸುರೇಶ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ತಂಡ ಶನಿವಾರದಂದು ಆಕಸ್ಮಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಲಕ್ಷಾಂತರ ಮೌಲ್ಯದ ಆಸ್ತಿ ದಾಖಲೆಗಳು ಮತ್ತು ಅಮೂಲ್ಯ ವಸ್ತುಗಳು ಪತ್ತೆಯಾಗಿವೆ.

ನಿವೃತ್ತಿ ಸಂಭ್ರಮಕ್ಕೆ ಶಾಕ್ ನೀಡಿದ ಲೋಕಾಯುಕ್ತ

ನಿವೃತ್ತಿ ನಿಮಿತ್ತ ಎಚ್. ಸುರೇಶ್ ಅವರ ಧಾರವಾಡದ ಸರ್ಕಾರಿ ನಿವಾಸದಲ್ಲಿ ಸತ್ಯನಾರಾಯಣ ಪೂಜೆ ಮತ್ತು ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಂತಹ ಸಂದರ್ಭದಲ್ಲೇ ಲೋಕಾಯುಕ್ತ ಪೊಲೀಸರು ಮನೆ ಹಾಗೂ ಕಚೇರಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎಲ್ಲ ಸಮಾರಂಭಗಳು ತಕ್ಷಣವೇ ಸ್ಥಗಿತಗೊಂಡವು.

ದಾಳಿಯಲ್ಲಿ ಪತ್ತೆಯಾದ ಆಸ್ತಿಗಳ ವಿವರ

ದಾಳಿಯ ವೇಳೆ ಲೋಕಾಯುಕ್ತ ಅಧಿಕಾರಿಗಳು ಸಾಕಷ್ಟು ಪ್ರಮಾಣದ ಆಸ್ತಿ ದಾಖಲೆಗಳು ಹಾಗೂ ನಗದು, ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ಸಿಕ್ಕಿರುವ ಪ್ರಮುಖ ವಸ್ತುಗಳು ಇಂತಿವೆ:

₹76,600 ನಗದು

₹21.58 ಲಕ್ಷ ಮೌಲ್ಯದ ಚಿನ್ನಾಭರಣ

₹2.39 ಲಕ್ಷ ಮೌಲ್ಯದ ಬೆಳ್ಳಿ ಆಭರಣ

₹13.44 ಲಕ್ಷ ಮೌಲ್ಯದ ಎರಡು ಫ್ಲಾಟ್‌ಗಳ ದಾಖಲೆ

₹50 ಲಕ್ಷ ಮೌಲ್ಯದ ಆರು ವಾಣಿಜ್ಯ ಮಳಿಗೆಗಳ ದಾಖಲೆ

₹2.60 ಕೋಟಿ ಮೌಲ್ಯದ ವಾಸದ ಮನೆ

₹35.36 ಲಕ್ಷ ಮೌಲ್ಯದ 11 ಎಕರೆ ಕೃಷಿ ಭೂಮಿ

₹1.65 ಕೋಟಿ ಮೌಲ್ಯದ ನಿಗದಿತ ಠೇವಣಿ ಪತ್ರಗಳು

₹26 ಲಕ್ಷ ಮೌಲ್ಯದ ಎರಡು ಕಾರುಗಳು

₹25 ಲಕ್ಷ ಮೌಲ್ಯದ ಪೀಠೋಪಕರಣಗಳು

ಒಟ್ಟು ಜಪ್ತಿ ಮಾಡಿದ ಆಸ್ತಿಯ ಮೌಲ್ಯವು ₹3.31 ಕೋಟಿ ವರೆಗೆ ತಲುಪಿದೆ.

ಅಕ್ರಮ ಆಸ್ತಿ ಗಳಿಕೆ: ಪ್ರಕರಣ ದಾಖಲು

ಅಧಿಕಾರಿಯ ಆದಾಯಕ್ಕೆ ಹೋಲಿಸಿದರೆ 153.54% ಅಧಿಕ ಆಸ್ತಿ ಹೊಂದಿರುವುದು ದೃಢಪಟ್ಟಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಲೋಕಾಯುಕ್ತ ಪೊಲೀಸರು ಎಚ್. ಸುರೇಶ್ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಆರೋಪದಡಿ ಪ್ರಕರಣ ದಾಖಲಿಸಿ ಮುಂದಿನ ಹಂತದ ತನಿಖೆ ನಡೆಸುತ್ತಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

12 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago