ಚಿಕ್ಕೋಡಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಪ್ರಾದೇಶಿಕ ಕಚೇರಿಯಲ್ಲಿ ಲಂಚ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೆಟ್ರೋಲ್ ಬಂಕ್‌ಗೆ ಅಗತ್ಯವಿರುವ ನೊ ಎನ್‌ಸಿ (NOC) ನೀಡಲು ಹಣದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಧಿಡೀರ್ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ದೂರುದಾರ ಸಾಗರ ದೋಡಮನಿ ಎಂಬುವವರಿಂದ ಬಂದ ಖಚಿತ ಮಾಹಿತಿ ಆಧರಿಸಿ, ಲೋಕಾಯುಕ್ತ ಡಿವೈಎಸ್ಪಿ ಬಿ.ಎಸ್. ಪಾಟೀಲ ಹಾಗೂ ಇನ್ಸ್ಪೆಕ್ಟರ್ ಎಸ್.ಎಚ್. ಹೋಸಮನಿ ನೇತೃತ್ವದ ತಂಡ ದಾಳಿ ನಡೆಸಿದ್ದು, ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶೋಭಾ ಪೊಳ್ ಹಾಗೂ ಕಂಪ್ಯೂಟರ್ ಆಪರೇಟರ್ ಪ್ರವೀಣ ದೊಡಮನಿ ಅವರನ್ನು ಲಂಚ ಸ್ವೀಕಾರದ ಪ್ರಕರಣದಲ್ಲಿ ಬಂಧಿಸಲಾಗಿದೆ.
ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿರುವ ಲೋಕಾಯುಕ್ತ ತಂಡವು ಹೆಚ್ಚಿನ ತನಿಖೆ ನಡೆಸುತ್ತಿದೆ. ಸಾರ್ವಜನಿಕ ಸೇವಾ ಕಚೇರಿಗಳಲ್ಲಿರುವ ಭ್ರಷ್ಟಾಚಾರ ನಿಗ್ರಹಿಸಲು ರಾಜ್ಯ ಲೋಕಾಯುಕ್ತ ಸಂಸ್ಥೆ ಕ್ರಮ ಕೈಗೊಂಡಿದ್ದಾರೆ.
ಈ ಪ್ರಕರಣದ ಸಂಬಂಧ ಅಧಿಕೃತ ದೂರು ದಾಖಲಿಸಲಾಗಿ, ಮುಂದಿನ ಹಂತದ ತನಿಖೆ ಮುಂದುವರಿದಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…