Latest

ಎನ್‌ಒಸಿ ನೀಡಲು ಲಂಚ ಬೇಡಿಕೆ – ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಚಿಕ್ಕೋಡಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಪ್ರಾದೇಶಿಕ ಕಚೇರಿಯಲ್ಲಿ ಲಂಚ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೆಟ್ರೋಲ್ ಬಂಕ್‌ಗೆ ಅಗತ್ಯವಿರುವ ನೊ ಎನ್‌ಸಿ (NOC) ನೀಡಲು ಹಣದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಧಿಡೀರ್ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ದೂರುದಾರ ಸಾಗರ ದೋಡಮನಿ ಎಂಬುವವರಿಂದ ಬಂದ ಖಚಿತ ಮಾಹಿತಿ ಆಧರಿಸಿ, ಲೋಕಾಯುಕ್ತ ಡಿವೈಎಸ್ಪಿ ಬಿ.ಎಸ್. ಪಾಟೀಲ ಹಾಗೂ ಇನ್ಸ್ಪೆಕ್ಟರ್ ಎಸ್.ಎಚ್. ಹೋಸಮನಿ ನೇತೃತ್ವದ ತಂಡ ದಾಳಿ ನಡೆಸಿದ್ದು, ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶೋಭಾ ಪೊಳ್ ಹಾಗೂ ಕಂಪ್ಯೂಟರ್ ಆಪರೇಟರ್ ಪ್ರವೀಣ ದೊಡಮನಿ ಅವರನ್ನು ಲಂಚ ಸ್ವೀಕಾರದ ಪ್ರಕರಣದಲ್ಲಿ ಬಂಧಿಸಲಾಗಿದೆ.

ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿರುವ ಲೋಕಾಯುಕ್ತ ತಂಡವು ಹೆಚ್ಚಿನ ತನಿಖೆ ನಡೆಸುತ್ತಿದೆ. ಸಾರ್ವಜನಿಕ ಸೇವಾ ಕಚೇರಿಗಳಲ್ಲಿರುವ ಭ್ರಷ್ಟಾಚಾರ ನಿಗ್ರಹಿಸಲು ರಾಜ್ಯ ಲೋಕಾಯುಕ್ತ ಸಂಸ್ಥೆ ಕ್ರಮ ಕೈಗೊಂಡಿದ್ದಾರೆ.

ಈ ಪ್ರಕರಣದ ಸಂಬಂಧ ಅಧಿಕೃತ ದೂರು ದಾಖಲಿಸಲಾಗಿ, ಮುಂದಿನ ಹಂತದ ತನಿಖೆ ಮುಂದುವರಿದಿದೆ.

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 hour ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago