Categories: CorruptionLatest

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ತಿಪ್ಪೇಸ್ವಾಮಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಿಢೀರ್ ದಾಳಿ ನಡೆಸಿದ್ದಾರೆ.

ಬಳ್ಳಾರಿಯ ಹನುಮನಗರದಲ್ಲಿರುವ ನಿವಾಸ, ಕುಡತಿನಿಯಲ್ಲಿನ ಮನೆ ಹಾಗೂ ಸಿರುಗುಪ್ಪದಲ್ಲಿರುವ ಕಚೇರಿ ಸೇರಿದಂತೆ ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಎಸ್ಪಿ ಎನ್. ವಾಸುದೇವರಾಮ ಅವರ ನೇತೃತ್ವದ ತಂಡಗಳು ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಿವೆ.

ದಾಳಿಯ ವೇಳೆ ಬಳ್ಳಾರಿ ಹಾಗೂ ಸಂಡೂರು ಭಾಗಗಳಲ್ಲಿ ಹೊಂದಿರುವ 8 ಎಕರೆ ಜಮೀನಿನ ದಾಖಲೆಗಳು, 12 ನಿವೇಶನಗಳ ದಾಖಲೆ ಪತ್ರಗಳು, 290 ಗ್ರಾಂ ಚಿನ್ನಾಭರಣ, 800 ಗ್ರಾಂ ಬೆಳ್ಳಿ ಆಭರಣ, ನಗದು ಹಣ, ಬ್ಯಾಂಕ್ ಖಾತೆಯಲ್ಲಿದ್ದ ₹50 ಲಕ್ಷ ಮೊತ್ತ ಹಾಗೂ ಕಾರು, ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 8 ವಾಹನಗಳ ಮಾಹಿತಿ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ತಿಪ್ಪೇಸ್ವಾಮಿ ಅವರು ತಮ್ಮ ಆದಾಯಕ್ಕಿಂತ ಶೇ.174ರಷ್ಟು ಅಧಿಕ ಆಸ್ತಿ ಸಂಪಾದಿಸಿರುವುದು ಬೆಳಕಿಗೆ ಬಂದಿದ್ದು, ಒಟ್ಟು ₹2.20 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪಾಧೀಕ್ಷಕರಾದ ಸಿದ್ದಪ್ಪ ಎಸ್. ಬೀಳಗಿ, ಸಚಿನ್ ಎಸ್. ಚಲುವಾದಿ, ಪೊಲೀಸ್ ನಿರೀಕ್ಷಕರಾದ ಸುರೇಶ್ ಎಂ. ಬಾವಿಮನಿ, ಅಮರೇಶ್ ಸೇರಿದಂತೆ ಸುಮಾರು 30 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದು, ತನಿಖೆ ಪೂರ್ಣಗೊಂಡ ಬಳಿಕ ಇನ್ನಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago