Categories: CorruptionLatest

ಲೋಕಾಯುಕ್ತ ದಾಳಿ: 4 ಜಿಲ್ಲೆಗಳಲ್ಲಿ ಭ್ರಷ್ಟಾಚಾರ ಆರೋಪದಡಿ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಶೋಧ

ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಭಾರೀ ಕಾರ್ಯಾಚರಣೆ ನಡೆಸಿದ್ದು, ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಚಿತ್ರದುರ್ಗದಲ್ಲಿ ಮಾಜಿ ಅಕೌಂಟೆಂಟ್ ಮನೆ ಮೇಲೆ ದಾಳಿ

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೆದೇಹಳ್ಳಿ ಬಡಾವಣೆಯ ನಿವಾಸ ಹಾಗೂ ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯಲ್ಲಿ ಶೋಧ ಕಾರ್ಯ ನಡೆದಿದೆ. ಸುಶೀಲಮ್ಮ ಅವರು ಒಂದು ವರ್ಷ ಹಿಂದೆ ವಿಆರ್‌ಎಸ್ ಪಡೆದಿದ್ದು, ಸೇವೆಯಲ್ಲಿದ್ದ ವೇಳೆ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಪರಿಶೀಲನೆ ಮುಂದುವರಿದಿದೆ.

ಬಳ್ಳಾರಿಯಲ್ಲಿ ಸಹಾಯಕ ನಿರ್ದೇಶಕ ಟಾರ್ಗೆಟ್

ಬಳ್ಳಾರಿಯಲ್ಲಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಸಿದ್ಧಾರ್ಥ್ ನಗರದಲ್ಲಿನ ನಿವಾಸ ಸೇರಿದಂತೆ ನಾಲ್ಕು ಕಡೆಗಳಲ್ಲಿ ಶೋಧ ನಡೆದಿದೆ. ಅವರ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪಗಳಿದ್ದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಶಿವಣ್ಣ ಬಳಸುತ್ತಿದ್ದ ಸರ್ಕಾರಿ ಬೊಲೆರೋ ವಾಹನವನ್ನು ಕೂಡ ಪರಿಶೀಲಿಸಲಾಗಿದ್ದು, ಅದರಲ್ಲಿ ಪತ್ತೆಯಾದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಮೈಸೂರು-ಮಂಡ್ಯದಲ್ಲಿ ಎಇಇ ರೇವಣ್ಣ ಮನೆಗಳ ಪರಿಶೀಲನೆ

ಮೈಸೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ರೇವಣ್ಣ ಅವರ ಕಚೇರಿ ಹಾಗೂ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರು ಮತ್ತು ಮಂಡ್ಯದ ಎರಡು ನಿವಾಸಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.

ಶಿವಮೊಗ್ಗದಲ್ಲಿ ಜಿಲ್ಲಾ ಅಧಿಕಾರಿ ಮನೆ ಮೇಲೆ ದಾಳಿ

ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್ ಅವರ ಮನೆ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆದಿದೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಶಿಕಾರಿಪುರದ ಚೆನ್ನಕೇಶವ ನಗರದಲ್ಲಿನ ಮನೆ, ತೋಟ, ಫಾರ್ಮ್ ಹೌಸ್ ಹಾಗೂ ಸಾಗರದ ಬಳಿಯ ಶಾಲೆಯ ಮೇಲೂ ಪರಿಶೀಲನೆ ನಡೆಸಲಾಗಿದೆ. ನಗರದ ನವಿಲೆ ಪ್ರದೇಶದ ಮನೆ ಮತ್ತು ಕೆಇಬಿ ಸರ್ಕಲ್ ಸಮೀಪದ ಬಿಸಿಎಂ ಕಚೇರಿಯಲ್ಲೂ ದಾಖಲೆ ಪರಿಶೀಲನೆ ನಡೆದಿದೆ.

ಇದೇ ವೇಳೆ, ಬಿಸಿಎಂ ಇಲಾಖೆಯ ರಾಘವೇಂದ್ರ ಎಂಬವರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದ್ದು, ಶಿವಮೊಗ್ಗದ ಚಾಲುಕ್ಯನಗರದಲ್ಲಿನ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ಬಹು ತಂಡಗಳ ಕಾರ್ಯಾಚರಣೆ

ಒಟ್ಟು ಹಲವು ತಂಡಗಳಾಗಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಶಿವಮೊಗ್ಗ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಯ ಅಧಿಕಾರಿಗಳೂ ಭಾಗಿಯಾಗಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಯುತ್ತಿದೆ.

ರಾಜ್ಯಾದ್ಯಂತ ನಡೆದ ಈ ಸಮನ್ವಿತ ದಾಳಿ, ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಸಂಸ್ಥೆಯ ಕಟ್ಟುನಿಟ್ಟಿನ ಕ್ರಮಕ್ಕೆ ಮತ್ತೊಮ್ಮೆ ಸಾಕ್ಷಿಯಾಗಿದೆ. ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿವರಗಳು ಮುಂದಿನ ದಿನಗಳಲ್ಲಿ ಹೊರಬೀಳುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

4 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

6 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

11 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago