Categories: CorruptionLatest

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಲಬುರಗಿ ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ರಾಜೇಶ್ವರಿ ಅವರ ನಿವಾಸ, ಖಾದ್ರಿ ಚೌಕ್‌ನಲ್ಲಿರುವ ಮತ್ತೊಂದು ಮನೆ ಹಾಗೂ ಜೆಸ್ಕಾಂ ಕಚೇರಿ ಸೇರಿದಂತೆ ಒಟ್ಟು ಮೂರು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಪರಿಶೀಲನೆ ನಡೆಸಿದ್ದಾರೆ.

ರಾಜೇಶ್ವರಿ ಅವರು ಬೆಳಗಿನ ವಾಕಿಂಗ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಲೋಕಾಯುಕ್ತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಆರಂಭಿಸಿದ್ದರು ಎನ್ನಲಾಗಿದೆ.

ನಿಗದಿತ ಆದಾಯಕ್ಕೆ ಹೋಲಿಸಿದರೆ ಆಸ್ತಿ ಹೆಚ್ಚಳವಾಗಿರುವ ಕುರಿತು ಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಮೂರು ಸ್ಥಳಗಳಲ್ಲೂ ದಾಖಲೆಗಳು ಹಾಗೂ ಆಸ್ತಿ-ಪಾಸ್ತಿ ಕುರಿತ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಲೋಕಾಯುಕ್ತರ ಪರಿಶೀಲನೆ ಪೂರ್ಣಗೊಂಡ ಬಳಿಕವೇ ಪತ್ತೆಯಾಗಿರುವ ಆಸ್ತಿ, ದಾಖಲೆಗಳು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಸ್ಪಷ್ಟವಾಗಲಿವೆ.

ಭ್ರಷ್ಟರ ಬೇಟೆ

Recent Posts

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

42 minutes ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

47 minutes ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

49 minutes ago

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು

ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…

51 minutes ago

ಪ್ರಿಯಕರನ ಜೊತೆ OYO ರೂಂಗೆ ಬಂದ ಯುವತಿ ಅನುಮಾನಾಸ್ಪದ ಸಾವು: ಆಸ್ಪತ್ರೆಯಿಂದಲೇ ಪ್ರಿಯಕರ ಪರಾರಿ

ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…

53 minutes ago

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago