Categories: CorruptionLatest

ಅಬಕಾರಿ ಅಧಿಕಾರಿಗೆ ಲೋಕಾಯುಕ್ತ ಬಲೆ: ಕೋಟ್ಯಂತರ ಅಕ್ರಮ ಆಸ್ತಿ ಪತ್ತೆ

ಉಡುಪಿ: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ವಿರುದ್ಧ ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಗ್ರಹಿಸಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ತನಿಖೆಯ ವೇಳೆ ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಮಾರ್ಚ್ 11ರಂದು ಲೋಕಾಯುಕ್ತ ಅಧಿಕಾರಿಗಳು ಶ್ರೀನಿವಾಸ್ ಟಿ.ಎಂ. ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳನ್ನು ಒಳಗೊಂಡಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿರುವ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆಸಿದರು. ದಾಳಿಯ ಸಂದರ್ಭದಲ್ಲಿ ಆರೋಪಿತ ಅಧಿಕಾರಿಗೆ ಸಂಬಂಧಿಸಿದಂತೆ ಹಲವು ಆಸ್ತಿಗಳ ದಾಖಲೆಗಳು ಮತ್ತು ಮೌಲ್ಯಮಾಪನಕ್ಕೆ ಒಳಪಡುವ ಸಂಪತ್ತಿನ ಮಾಹಿತಿ ದೊರಕಿದೆ.
ಪರಿಶೀಲನೆ ವೇಳೆ ಒಟ್ಟು 11 ನಿವೇಶನಗಳು, ಆರು ವಾಸದ ಮನೆಗಳು ಹಾಗೂ ಸುಮಾರು 31 ಎಕರೆ ಕೃಷಿ ಜಮೀನು ಇರುವುದನ್ನು ಪತ್ತೆಹಚ್ಚಲಾಗಿದೆ. ಈ ಸ್ಥಿರ ಆಸ್ತಿಗಳ ಒಟ್ಟು ಮೌಲ್ಯ ಸುಮಾರು ₹6.90 ಕೋಟಿ ಎಂದು ಅಂದಾಜಿಸಲಾಗಿದೆ.
ಇದರೊಂದಿಗೆ ಸುಮಾರು ₹1.47 ಕೋಟಿ ಮೌಲ್ಯದ ಚಿನ್ನಾಭರಣಗಳು, ₹17 ಲಕ್ಷ ಮೌಲ್ಯದ ವಾಹನಗಳು, ₹25.75 ಲಕ್ಷ ಮೌಲ್ಯದ ಬ್ಯಾಂಕ್ ಠೇವಣಿಗಳು ಸೇರಿದಂತೆ ಹಲವು ಚರ ಆಸ್ತಿಗಳೂ ಪತ್ತೆಯಾಗಿವೆ. ಇನ್ನಿತರ ವಸ್ತುಗಳ ಮೌಲ್ಯ ಸುಮಾರು ₹72 ಲಕ್ಷ ಎಂದು ಅಂದಾಜಿಸಲಾಗಿದ್ದು, ಒಟ್ಟಾರೆ ಚರ ಆಸ್ತಿಯ ಮೌಲ್ಯ ಸುಮಾರು ₹2.66 ಕೋಟಿ ಆಗಿದೆ.
ಸ್ಥಿರ ಮತ್ತು ಚರ ಆಸ್ತಿಗಳನ್ನು ಸೇರಿಸಿ ಒಟ್ಟು ₹9.57 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಉಡುಪಿ ಲೋಕಾಯುಕ್ತ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀನಿವಾಸ್ ಟಿ.ಎಂ. ಅವರು ಇದಕ್ಕೂ ಮೊದಲು ಮಂಗಳೂರಿನಲ್ಲಿ ಅಬಕಾರಿ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಆ ಅವಧಿಯಲ್ಲಿಯೂ ಅವರ ವಿರುದ್ಧ ಹಲವು ಭ್ರಷ್ಟಾಚಾರ ಸಂಬಂಧಿತ ಆರೋಪಗಳು ಕೇಳಿಬಂದಿದ್ದವು ಎಂದು ತಿಳಿದುಬಂದಿದೆ. ತನಿಖೆ ಮುಂದುವರೆದಿದ್ದು, ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

45 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago