Latest

ಲೋಕಾಯುಕ್ತ ದಿಢೀರ್ ದಾಳಿ: ಮುನವಳ್ಳಿ ಪುರಸಭೆಯಲ್ಲಿ ದಾಖಲೆ ಪರಿಶೀಲನೆ

ಬೆಳಗಾವಿ, ಆ.7: ಮುನವಳ್ಳಿ ಪುರಸಭೆ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇತೃತ್ವದ ತಂಡ ಇಂದು ಮುಂಜಾನೆ ಪುರಸಭೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದೆ. ದಾಳಿಯ ವೇಳೆ ಲೋಕಾಯುಕ್ತ ಎಸ್‌ಪಿ ಹನುಮಂತರಾಯ ಹಾಗೂ ಸಿಬ್ಬಂದಿ ಸಹಿತ ದರ್ಜೆಯ ಅಧಿಕಾರಿಗಳ ತಂಡವೂ ಸೇರಿತ್ತು.

ಪೌರ ಸೇವೆಗಳ ಕುರಿತಂತೆ ಸಾರ್ವಜನಿಕರಿಂದ ನೇರವಾಗಿ ಮಾಹಿತಿ ಸಂಗ್ರಹಿಸಿ, ಕಚೇರಿಯಲ್ಲಿ ನಡೆಯುತ್ತಿರುವ ಕಾರ್ಯಪದ್ಧತಿಯನ್ನು ಅಧ್ಯಯನ ನಡೆಸಲಾಗಿದೆ. ದಾಖಲೆ ಹಸ್ತಾಂತರದಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವ ತಿಳಿದುಬಂದಿದೆ.

ಕಚೇರಿಯಲ್ಲಿನ ಪ್ರಮುಖ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, ಅವ್ಯವಸ್ಥೆಯ ಯಾವುದೇ ಲಕ್ಷಣಗಳು ಕಂಡುಬಂದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ದಾಳಿಯಿಂದ ಸ್ಥಳೀಯ ಆಡಳಿತ ಯಂತ್ರಕ್ಕೆ ಶಾಕ್ ನೀಡಿದ್ದು, ಪುರಸಭೆಯ ಒಳಾಂಗಣದಲ್ಲಿ ಆತಂಕದ ವಾತಾವರಣ ಮೂಡಿಸಿದೆ.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

29 minutes ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

1 hour ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

2 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

2 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

22 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

1 day ago