Latest

ಲಾರಿ-ಬೈಕ್ ಡಿಕ್ಕಿ: ದಂಪತಿ ಸೇರಿದಂತೆ ಒಂದೇ ಕುಟುಂಬದ ಮೂವರು ದಾರುಣ ಸಾವು

ನಂಜನಗೂಡು ತಾಲ್ಲೂಕಿನ ಸಂಗಮ ಮತ್ತು ಹುಲ್ಲಹಳ್ಳಿ ನಡುವಿನ ಮುಖ್ಯರಸ್ತೆಯ ಕಣೇನೂರು ಬಳಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ದಂಪತಿ ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಮೃತರನ್ನು ಹಂಚೀಪುರ ಗ್ರಾಮದ ಚಿಕ್ಕಸ್ವಾಮಿ (45), ಅವರ ಪತ್ನಿ ರೂಪ (38) ಹಾಗೂ ಕಣೇನೂರು ಗ್ರಾಮದ ಚನ್ನಮಲ್ಲಮ್ಮ (55) ಎಂದು ಗುರುತಿಸಲಾಗಿದೆ.

ಚಿಕ್ಕಸ್ವಾಮಿ, ರೂಪ ಮತ್ತು ಚನ್ನಮಲ್ಲಮ್ಮ ಬೈಕ್‌ನಲ್ಲಿ ಶ್ರೀಕ್ಷೇತ್ರ ಸಂಗಮಕ್ಕೆ ತೆರಳಿದ್ದರು. ಪುಣ್ಯಕ್ಷೇತ್ರದ ಭೇಟಿಗೆ ನಂತರ ಒಂದು ಮದುವೆಯಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ವೇಳೆ ಎದುರಿನಿಂದ ಬರುತಿದ್ದ ಲಾರಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಲಾರಿ ನೇರವಾಗಿ ಬೈಕ್ ಮೇಲೆ ಹತ್ತಿ ಹೋಗಿದ್ದು, ಮುಂಭಾಗದ ಚಕ್ರ ಮೃತದೇಹಗಳ ಮೇಲೆ ಹರಿದ ಪರಿಣಾಮ ಮೂವರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನೆಯ ಮಾಹಿತಿ ಲಭ್ಯವಾದ ಕೂಡಲೆ ಎಎಸ್‌ಪಿ ಮಲ್ಲಿಕ್, ಡಿವೈಎಸ್ಪಿ ರಘು, ಪಿಎಸ್ಐ ಚೇತನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೊಳಗಾದ ಲಾರಿ ತಮಿಳುನಾಡು ನೋಂದಾಯಿತವಾಗಿದ್ದು, ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮಿಗಿಲು ಮುಟ್ಟಿದ್ದು, ಮನಕಲಕುವ ದೃಷ್ಯ ಉಂಟಾಗಿತ್ತು.  ವರದಿ: ಮೋಹನ್

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

11 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

12 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

24 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

24 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago