Categories: CrimeLatest

ಇನ್‌ಸ್ಟಾಗ್ರಾಮ್‌ನಲ್ಲಿ ಆರಂಭವಾದ ಪ್ರೀತಿ ದುರಂತ ಅಂತ್ಯ: ಬೆಂಗಳೂರಿನಲ್ಲಿ ಲಿವ್-ಇನ್ ಸಂಗಾತಿಯ ಕತ್ತು ಹಿಸುಕಿ ಕೊಲೆ.!

ಬೆಂಗಳೂರು: ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗಿದ್ದ ಸಂಬಂಧವು ಕೊನೆಗೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವಕನೊಬ್ಬ ತನ್ನ ಸಂಗಾತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ.

ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಶರತ್ ಹಾಗೂ ಅನುಷಾ ಎಂಬುವವರಿಗೆ ಸುಮಾರು ಆರು ತಿಂಗಳ ಹಿಂದೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಬಳಿಕ ಸ್ನೇಹ ಪ್ರೀತಿಗೆ ತಿರುಗಿ, ಇಬ್ಬರೂ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು. ಶರತ್ ವಾಟರ್ ಟ್ಯಾಂಕ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕೊಠಡಿಯಲ್ಲೇ ಇಬ್ಬರೂ ನೆಲೆಸಿದ್ದರು.

ಅನುಷಾಗೆ ತಂದೆ-ತಾಯಿ ಇರಲಿಲ್ಲ. ಆಕೆಗೆ ಒಬ್ಬ ಅಕ್ಕ ಮಾತ್ರ ಇದ್ದರು ಎನ್ನಲಾಗಿದೆ. ಶರತ್ ಕೆಲಸಕ್ಕೆ ತೆರಳಿದ ವೇಳೆ ಅನುಷಾ ಮನೆಯಲ್ಲೇ ಇರುತ್ತಿದ್ದಳು. ಆದರೆ ಮನೆ ಕೆಲಸಗಳಲ್ಲಿ ಆಸಕ್ತಿ ತೋರದಿರುವುದು, ಆಗಾಗ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುವುದು ಹಾಗೂ ಕೆಲ ಯುವಕರೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿರುವ ವಿಚಾರಗಳಿಗೆ ಸಂಬಂಧಿಸಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆ ಉಂಟಾದ ಗಲಾಟೆಯ ಬಳಿಕ ಅನುಷಾ ಮನೆ ಬಿಟ್ಟು ತೆರಳಿದ್ದಳು. ಬಳಿಕ ಶರತ್ ಸಕಲೇಶಪುರಕ್ಕೆ ತೆರಳಿ ಆಕೆಯನ್ನು ಮರಳಿ ಬೆಂಗಳೂರಿಗೆ ಕರೆತಂದಿದ್ದನು. ಆದರೆ ಶನಿವಾರ ರಾತ್ರಿ ಮತ್ತೆ ಇದೇ ವಿಚಾರವಾಗಿ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ ಎನ್ನಲಾಗಿದೆ.

ಜಗಳ ತಾರಕಕ್ಕೇರಿದ ವೇಳೆ ಆಕ್ರೋಶಗೊಂಡ ಶರತ್, ಅನುಷಾಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಯಾರಿಗೂ ಅನುಮಾನ ಬರದಂತೆ ಕೊಠಡಿಗೆ ಬೀಗ ಹಾಕಿ, ಕೀಲಿಕೈಯನ್ನು ಕಿಟಕಿ ಬಳಿ ಇಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆ ಬೆಳಕಿಗೆ ಬಂದಿದ್ದು ಕೂಡ ವಿಚಿತ್ರ ರೀತಿಯಲ್ಲಿ. ಆರೋಪಿ ಶರತ್ ತಾನೇ ಒಬ್ಬ ವಕೀಲರಿಗೆ ಕರೆ ಮಾಡಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎನ್ನಲಾಗಿದೆ. ತಕ್ಷಣ ವಕೀಲರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಕಿಟಕಿ ಬಳಿ ಇದ್ದ ಕೀಲಿಯಿಂದ ಬಾಗಿಲು ತೆರೆದು ಪರಿಶೀಲಿಸಿದಾಗ ಅನುಷಾಳ ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶರತ್‌ನನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

38 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago