ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ವಿಶಿಷ್ಟ ಮದುವೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಒಂದು ಮಿಸ್ಡ್ ಕಾಲ್‌ನಿಂದ ಆರಂಭವಾದ ಪರಿಚಯ ಪ್ರೀತಿಯಾಗಿ ಬೆಳೆಯುತ್ತಿದ್ದಂತೆ, ಐದು ಮಕ್ಕಳ ತಾಯಿಯಾದ ಮಹಿಳೆ ತನ್ನ ಪತಿ ಹಾಗೂ ಮಕ್ಕಳನ್ನು ಬಿಟ್ಟು 19 ವರ್ಷದ ಯುವಕನನ್ನು ವಿವಾಹವಾಗಿರುವ ಘಟನೆ ಎಲ್ಲರ ಗಮನ ಸೆಳೆದಿದೆ.
ಜಮುಯಿ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾದುಯಿ ಬರಿಯಾರ್ಪುರ ಗ್ರಾಮದ ನಿವಾಸಿ 36 ವರ್ಷದ ಸೀಮಾ ಪರ್ವಿನ್ ಅಲಿಯಾಸ್ ಬಿಂದು ದೇವಿ, 19 ವರ್ಷದ ಮಹಾವೀರ್ ಠಾಕೂರ್ ಅವರನ್ನು ವಿವಾಹವಾಗಿದ್ದಾರೆ. ಇಬ್ಬರ ನಡುವಿನ 17 ವರ್ಷಗಳ ವಯೋಮಾನದ ಅಂತರ ಈ ಮದುವೆಯನ್ನು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
ಮಾಹಿತಿಯ ಪ್ರಕಾರ, ಸೀಮಾ ಪರ್ವಿನ್ ಮತ್ತು ಮಹಾವೀರ್ ಠಾಕೂರ್ ನಡುವೆ ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿತ್ತು. ಬಳಿಕ ಇಬ್ಬರೂ ನಿರಂತರವಾಗಿ ದೂರವಾಣಿ ಮೂಲಕ ಮಾತನಾಡುತ್ತಿದ್ದು, ಆ ಸ್ನೇಹ ಪ್ರೀತಿಗೆ ತಿರುಗಿತ್ತು. ಪ್ರೇಮ ಸಂಬಂಧ ಗಾಢವಾಗುತ್ತಿದ್ದಂತೆ ಸೀಮಾ ತನ್ನ ಕುಟುಂಬವನ್ನು ತೊರೆದು ಕೋಲ್ಕತ್ತಾಗೆ ತೆರಳಿದ್ದು, ಅಲ್ಲಿ ದೇವಸ್ಥಾನವೊಂದರಲ್ಲಿ ಮಹಾವೀರ್ ಅವರನ್ನು ವಿವಾಹವಾಗಿದ್ದಾಳೆ ಎನ್ನಲಾಗಿದೆ.
ಮದುವೆಯ ಬಳಿಕ ಇಬ್ಬರೂ ಒಟ್ಟಿಗೆ ಇರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅವು ವೈರಲ್ ಆಗಿವೆ. ಈ ಘಟನೆ ಸ್ಥಳೀಯವಾಗಿ ಮಾತ್ರವಲ್ಲದೆ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ.
ಸೀಮಾ ಪರ್ವಿನ್ ಅವರ ವೈಯಕ್ತಿಕ ಜೀವನವೂ ಕುತೂಹಲ ಕೆರಳಿಸಿದೆ. ಸುಮಾರು ಹತ್ತು ವರ್ಷಗಳ ಹಿಂದೆ ಬಿಂದು ದೇವಿ ಎಂಬ ಹೆಸರಿನಿಂದ ಪರಿಚಿತರಾಗಿದ್ದ ಅವರು, ಮನನ್ ಆಲಂ ಎಂಬ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದರು. ಆ ಸಂದರ್ಭದಲ್ಲಿ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಸೀಮಾ ಪರ್ವಿನ್ ಎಂಬ ಹೆಸರನ್ನು ಸ್ವೀಕರಿಸಿದ್ದರು. ದಾಂಪತ್ಯ ಜೀವನದಲ್ಲಿ ಅವರಿಗೆ ಐದು ಮಕ್ಕಳು ಜನಿಸಿದ್ದರು.
ಆದರೆ ಈಗ ಮಹಾವೀರ್ ಠಾಕೂರ್ ಅವರನ್ನು ವಿವಾಹವಾಗುವ ಸಂದರ್ಭದಲ್ಲಿ ಅವರು ಮತ್ತೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ಮದುವೆಯ ಜೊತೆಗೆ ಮತಾಂತರದ ವಿಚಾರವನ್ನೂ ಚರ್ಚೆಯ ಕೇಂದ್ರಬಿಂದುವಾಗಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸೀಮಾ, ತನ್ನ ಮೊದಲ ದಾಂಪತ್ಯ ಜೀವನದಲ್ಲಿ ಸಂತೋಷ ಇರಲಿಲ್ಲ ಹಾಗೂ ಅನೇಕ ಕಷ್ಟಗಳನ್ನು ಅನುಭವಿಸಿದ್ದೆ ಎಂದು ಹೇಳಿದ್ದಾಳೆ. ಈಗ ಮಹಾವೀರ್ ಜೊತೆ ಸಂತೋಷದಿಂದ ಜೀವನ ನಡೆಸುತ್ತಿದ್ದೇನೆ ಎಂದು ಆಕೆ ತಿಳಿಸಿದ್ದಾಳೆ.
ಇನ್ನೊಂದೆಡೆ ಮಹಾವೀರ್ ಠಾಕೂರ್ ಕೂಡ ಈ ಮದುವೆ ತನ್ನ ಇಚ್ಛೆಯಂತೆ ನಡೆದಿದ್ದು, ಇಬ್ಬರೂ ಪರಸ್ಪರ ಒಪ್ಪಿಗೆಯೊಂದಿಗೆ ಜೀವನ ಆರಂಭಿಸಿದ್ದೇವೆ ಎಂದು ಹೇಳಿದ್ದಾರೆ.
ಆದರೆ ಸೀಮಾ ಅವರ ಮೊದಲ ಪತಿ ಮನನ್ ಆಲಂ, ಪತ್ನಿಯ ನಡೆ-ನುಡಿಗಳ ಬಗ್ಗೆ ಆರೋಪಗಳನ್ನು ಮಾಡಿದ್ದು, ಮಕ್ಕಳನ್ನು ತನ್ನ ವಶದಲ್ಲೇ ಇಟ್ಟುಕೊಳ್ಳುವುದಾಗಿ ತಿಳಿಸಿದ್ದಾರೆ. ಈ ಘಟನೆಯು ಸಾಮಾಜಿಕ, ಕುಟುಂಬ ಹಾಗೂ ಧಾರ್ಮಿಕ ಆಯಾಮಗಳ ಹಿನ್ನೆಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…