Latest

ಸಾಲ ಕೊಡಿಸುವ ಆಮಿಷ.. ಲಕ್ಷಾಂತರ ರೂ ವಂಚನೆ: ಆರೋಪಿ ಅಂದರ್..!

ನಂಜನಗೂಡು: ಮೈಕ್ರೋ ಫೈನಾನ್ಸ್ ಹಾವಳಿಗಳಿಂದ ಜನರು ಬೇಸತ್ತು ಗ್ರಾಮಗಳನ್ನು ತೊರೆಯುತ್ತಿರುವುದರ ಜೊತೆಗೆ ಪ್ರಾಣಗಳನ್ನು ಕಳೆದುಕೊಳ್ಳುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲೂ ಇಲ್ಲೊಬ್ಬ ಖತರ್ನಾಕ್ ಸಾಲಕೊಡಿಸುವ ನೆಪದಲ್ಲಿ ಹಲವಾರು ಮಂದಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿ ಬಂಧಿತನಾಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಮಾದನಹಳ್ಳಿ ಗ್ರಾಮದ ಸುನಿಲ್ ಎಂಬುವವನೆ ಬಂದಿತ ಆರೋಪಿ
ಹುಲ್ಲಹಳ್ಳಿಯ ಕಲ್ಯಾಣಿ ಮೋಟಾರ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮಾದನಹಳ್ಳಿ ಸುನಿಲ್ ತನಗೆ ಪ್ರತಿಷ್ಠಿತ ಫೈನಾನ್ಸ್ ಹಾಗೂ ಸ್ಥಳೀಯ ಬ್ಯಾಂಕುಗಳ ವ್ಯವಸ್ಥಾಪಕರು ಪರಿಚಯವಿದ್ದು ಕಡಿಮೆ ಬಡ್ಡಿ ದರದಲ್ಲಿ ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ ಸಾಲದ ಹಣಕ್ಕೆ ಕಮಿಷನ್ ನೀಡಬೇಕೆಂದು ಹೇಳಿದ್ದಾನೆ. ಈತನ ಬೆಣ್ಣೆ ಮಾತಿಗೆ ಕರಗಿದ ಅಮಾಯಕರು ಸಾಲದ ಆಸೆಗಾಗಿ ಮೊದಲೆ ಕಮಿಷನ್ ಹಣ ನೀಡಿದ್ದಾರೆ. ಸಾಕಷ್ಟು ಜನರಿಂದ ಹಣ ಪಡೆದಿದ್ದರು ಯಾವುದೇ ಸಾಲ ಕೊಡಿಸಿಲ್ಲವೆಂದು ಹೇಳಲಾಗಿದೆ. ಅಲ್ಲದೆ ಕಮಿಷನ್ ಹೆಸರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದಾನೆಂದು ತಿಳಿದು ಬಂದಿದೆ.
ಪ್ರತಿಷ್ಠಿತ ಫೈನಾನ್ಸ್ ಗಳಲ್ಲಿ ಹಾಗೂ ಸ್ಥಳೀಯ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ಲಕ್ಷಾಂತರ ರೂ ವಂಚಿಸಿದ ಐನಾತಿಯನ್ನ ಡಿವೈಎಸ್ಪಿ ರಘು ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಚಂದ್ರಶೇಖರ್ ಹಾಗೂ ಹುಲ್ಲಹಳ್ಳಿ ಪಿಎಸ್ಐ ಚೇತನ್ ಕುಮಾರ್ ಹಾಗೂ ದಫೆದಾರ್ ದೊಡ್ಡಯ್ಯ ಕಾರ್ಯಚರಣೆ ಮಾಡಿ ಖತರ್ನಾಕ್ ಐನಾತಿಯನ್ನು ಬಂಧಿಸಿದ್ದಾರೆ.
ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಆಕಲ ಗ್ರಾಮದ ಮಹಿಳೆಯೋರ್ವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಸುನಿಲ್ ನನ್ನು ವಶಕ್ಕೆ ಪಡೆದಿದ್ದಾರೆ. ಮೈಕ್ರೋ ಫೈನಾನ್ಸ್ ಗಳ ಹಾವಳಿಯ ಶಾಕ್ ನಿಂದ ನರಳುತ್ತಿರುವ ಜನರಿಗೆ ಈ ಐನಾತಿಯ ವಂಚನೆ ಮತ್ತಷ್ಟು ಚಿಂತೆಗೀಡು ಮಾಡಿದೆ. ವರದಿ: ಮೋಹನ್

nazeer ahamad

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 days ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

6 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

6 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

6 days ago