ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೂವರು ಹಿರಿಯ ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಒಟ್ಟು 14 ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಂಡವು ಎಪಿಎಂಸಿ (ಕೃಷಿ ಇಲಾಖೆ) ಹೆಚ್ಚುವರಿ ನಿರ್ದೇಶಕಿ ಪುಷ್ಪ ಡಿ.ಆರ್., ಕೆಆರ್‌ಐಡಿಎಲ್‌ನ ಸೂಪರಿಂಟೆಂಡಿಂಗ್ ಇಂಜಿನಿಯರ್ ಪ್ರವೀಣ್ ಶ್ರೀಹರಿ ಹಾಗೂ ಸಾರ್ವಜನಿಕ ಕಾಮಗಾರಿ ಇಲಾಖೆ (PWD) ಕಾರ್ಯನಿರ್ವಾಹಕ ಇಂಜಿನಿಯರ್ ನರೇಂದ್ರ ಅವರಿಗೆ ಸಂಬಂಧಿಸಿದ ನಿವಾಸಗಳು ಮತ್ತು ಕಚೇರಿಗಳಲ್ಲಿ ಶೋಧ ನಡೆಸಿತು. ಈ ಕಾರ್ಯಾಚರಣೆಯಲ್ಲಿ 20ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಪ್ರಾಥಮಿಕ ಮಾಹಿತಿಯಂತೆ, ಎಪಿಎಂಸಿ ಹೆಚ್ಚುವರಿ ನಿರ್ದೇಶಕಿ ಪುಷ್ಪ ಅವರ ನಿವಾಸದಲ್ಲಿ ಚಿನ್ನಾಭರಣ ಸೇರಿದಂತೆ ಮೌಲ್ಯಯುತ ವಸ್ತುಗಳು ಪತ್ತೆಯಾಗಿವೆ. ದಾಳಿಯಲ್ಲಿ ವಶಪಡಿಸಿಕೊಂಡ ದಾಖಲೆಗಳು, ಆಸ್ತಿ-ಪಾಸ್ತಿ ಹಾಗೂ ಇತರ ವಸ್ತುಗಳ ಮೌಲ್ಯಮಾಪನ ಕಾರ್ಯ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…