Categories: CrimeLatest

ಮದುವೆಯಾದ ಮೂರೇ ತಿಂಗಳಲ್ಲಿ ಮಹಾ ಮೋಸ! ಟೀಗೆ ನಿದ್ದೆ ಮಾತ್ರೆ ಬೆರೆಸಿ ಲಕ್ಷಾಂತರ ರೂ. ನಗದು-ಚಿನ್ನದೊಂದಿಗೆ ಪರಾರಿಯಾದ ಪತ್ನಿ

ಹರ್ಯಾಣದ ಪಾಣಿಪತ್‌ನಲ್ಲಿ ಮದುವೆಯಾದ ಕೇವಲ ಮೂರು ತಿಂಗಳಲ್ಲೇ ಪತಿಯ ಕುಟುಂಬಕ್ಕೆ ಆಘಾತ ಉಂಟುಮಾಡಿದ ಘಟನೆ ಬೆಳಕಿಗೆ ಬಂದಿದೆ. ಗರ್ಭಿಣಿಯಾಗಿದ್ದ ಮಹಿಳೆ ತವರು ಮನೆಗೆ ತೆರಳಿ ಪತಿಯ ಗಮನಕ್ಕೆ ತರದೇ ಗರ್ಭಪಾತ ಮಾಡಿಸಿಕೊಂಡು, ಬಳಿಕ ನೈಸರ್ಗಿಕವಾಗಿ ಗರ್ಭಪಾತವಾಗಿದೆ ಎಂದು ನಂಬಿಸಿದ್ದಾಳೆ. ಅದಾದ ಕೆಲವೇ ದಿನಗಳಲ್ಲಿ ಮನೆಯವರ ಚಹಾದಲ್ಲಿ ನಿದ್ದೆ ಮಾತ್ರೆ ಬೆರೆಸಿ, ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿರುವ ಆರೋಪ ಕೇಳಿಬಂದಿದೆ.

ಮಾಹಿತಿಯ ಪ್ರಕಾರ, ಪಾಣಿಪತ್ ನಿವಾಸಿ ಕೃಷ್ಣ ಎಂಬುವರೊಂದಿಗೆ ‘ನಿವೃತ್ತಿ’ ಎಂಬ ಯುವತಿಯ ವಿವಾಹ ಮೂರು ತಿಂಗಳ ಹಿಂದೆ ನಡೆದಿತ್ತು. ಮದುವೆಯಾದ ಕೆಲವೇ ದಿನಗಳಲ್ಲಿ ಆಕೆ ಗರ್ಭಿಣಿಯಾಗಿದ್ದಳು. ಎರಡು ತಿಂಗಳ ಬಳಿಕ ತವರು ಮನೆಗೆ ತೆರಳಿದ ಆಕೆ, ಪತಿ ಅಥವಾ ಅತ್ತೆ ಮನೆಯವರ ಅನುಮತಿ ಅಥವಾ ಮಾಹಿತಿಯಿಲ್ಲದೆ ಗರ್ಭಪಾತ ಮಾಡಿಸಿಕೊಂಡು ವಾಪಸ್ಸಾಗಿದ್ದಳು. ಮನೆಗೆ ಮರಳಿದ ಬಳಿಕ ತನಗೆ ಸ್ವಾಭಾವಿಕವಾಗಿ ಗರ್ಭಪಾತವಾಗಿದೆ ಎಂದು ಹೇಳಿ ಕುಟುಂಬಸ್ಥರನ್ನು ನಂಬಿಸಿದ್ದಾಳೆ ಎನ್ನಲಾಗಿದೆ.

ಈ ಘಟನೆಯ ಕೆಲ ದಿನಗಳ ನಂತರ, ರಾತ್ರಿ ವೇಳೆ ಮನೆಯ ಎಲ್ಲರಿಗೂ ಚಹಾ ತಯಾರಿಸಿ ಅದರಲ್ಲಿ ನಿದ್ದೆ ಮಾತ್ರೆ ಬೆರೆಸಿದ್ದಾಳೆ ಎಂದು ಆರೋಪಿಸಲಾಗಿದೆ. ಚಹಾ ಸೇವಿಸಿದ ಬಳಿಕ ಕುಟುಂಬದ ಸದಸ್ಯರೆಲ್ಲರೂ ಗಾಢ ನಿದ್ರೆಗೆ ಜಾರಿದಾಗ, ಮನೆಯಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಬ್ಯಾಗ್‌ಗೆ ತುಂಬಿಕೊಂಡು ರಾತ್ರೋರಾತ್ರಿ ಪರಾರಿಯಾಗಿದ್ದಾಳೆ.

ಮರುದಿನ ಬೆಳಿಗ್ಗೆ ಕುಟುಂಬಸ್ಥರು ಎಚ್ಚರಗೊಂಡಾಗ ಮನೆಯಲ್ಲಿದ್ದ ಹಣ ಹಾಗೂ ಆಭರಣಗಳು ಕಾಣೆಯಾಗಿದ್ದು, ನಿವೃತ್ತಿಯೂ ನಾಪತ್ತೆಯಾಗಿರುವುದು ಗೊತ್ತಾಗಿದೆ. ಬಳಿಕ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ದೊಡ್ಡ ಬ್ಯಾಗ್‌ಗಳನ್ನು ಹೊತ್ತುಕೊಂಡು ಮಹಿಳೆ ರಾತ್ರಿ ಮನೆಯಿಂದ ಹೊರಟು ಹೋಗುತ್ತಿರುವ ದೃಶ್ಯಗಳು ದಾಖಲಾಗಿರುವುದು ಪತ್ತೆಯಾಗಿದೆ.

ಈ ಸಂಬಂಧ ಪತಿ ಕೃಷ್ಣ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಇತರೆ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ. ಪರಾರಿಯಾಗಿರುವ ಮಹಿಳೆಯ ಪತ್ತೆಗೆ ವಿಶೇಷ ಶೋಧ ಕಾರ್ಯವೂ ನಡೆಯುತ್ತಿದೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

13 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

13 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

13 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago