Categories: CorruptionCrimeLatest

ಬಹುಕೋಟಿ ವಂಚನೆಗೆ ಬಿಗ್ ಟ್ವಿಸ್ಟ್! ಮಹಿಳಾ ಅಭಿವೃದ್ಧಿ ಸಂಸ್ಥೆ ಪ್ರಕರಣದಲ್ಲಿ ಇಬ್ಬರ ಬಂಧನ; ₹43.40 ಲಕ್ಷ ವಂಚನೆ ಬಯಲು

ಬಾಗಲಕೋಟೆ: ಜಿಲ್ಲೆಯ ಬೀಳಗಿ ಪಟ್ಟಣದ ಶ್ರೀ ದುರ್ಗಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣದ ತನಿಖೆಗೆ ಮಹತ್ವದ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೀಳಗಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ₹43.40 ಲಕ್ಷಕ್ಕೂ ಅಧಿಕ ಹಣದ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.

ಸಂಸ್ಥೆಯ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿ ದೂರು ನೀಡಿದ ಬಳಿಕ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ತನಿಖೆಯ ಭಾಗವಾಗಿ ಸಂಸ್ಥೆಯ ಕಚೇರಿಯಲ್ಲಿ ಶೋಧ ನಡೆಸಿದ ಅಧಿಕಾರಿಗಳು 200ಕ್ಕೂ ಹೆಚ್ಚು ರಿಜಿಸ್ಟರ್‌ಗಳು, ವಿವಿಧ ದಾಖಲೆಗಳು, ರಸೀದಿ ಪುಸ್ತಕಗಳು ಹಾಗೂ ಕಂಪ್ಯೂಟರ್‌ಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ಪ್ರಕರಣದಲ್ಲಿ ಒಟ್ಟು ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈಗಾಗಲೇ ಎಂಟು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಳಿದ ಆರೋಪಿಗಳ ಪತ್ತೆ ಮತ್ತು ತನಿಖೆ ಮುಂದುವರಿದಿದೆ.

ಈ ಮಧ್ಯೆ, ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾಗಿರುವ ಸಾರ್ವಜನಿಕರು ತಮ್ಮ ಬಳಿ ಇರುವ ದಾಖಲೆಗಳೊಂದಿಗೆ ಕೂಡಲೇ ಬೀಳಗಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಮನವಿ ಮಾಡಿವೆ. ಪ್ರಕರಣದ ಸಂಪೂರ್ಣ ಜಾಲವನ್ನು ಭೇದಿಸಲು ಪೊಲೀಸರು ಇನ್ನಷ್ಟು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

2 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

2 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

2 days ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

3 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

3 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

3 days ago