Categories: CrimeLatest

5 ದಿನದಲ್ಲೇ ಮದುವೆಗೆ ಬಿಗ್ ಟ್ವಿಸ್ಟ್: ‘ಗಂಡ ಬೇಡ’ ಎಂದ ನವವಧು, ತಾಳಿ-ಕಾಲು ಚೈನು ಬಿಚ್ಚಿಟ್ಟು ತವರಿಗೆ!

ಮದುವೆ ಎನ್ನುವುದು ಜೀವನಪೂರ್ತಿ ಜೊತೆಯಾಗಿ ಸಾಗುವ ಬಾಂಧವ್ಯ ಎಂಬ ನಂಬಿಕೆ ಇದೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ಆರಂಭವಾಗುವ ಕೆಲವು ಪ್ರೇಮಕಥೆಗಳು ಕೆಲವೇ ದಿನಗಳಲ್ಲಿ ಅನಿರೀಕ್ಷಿತ ತಿರುವು ಪಡೆಯುತ್ತಿರುವ ಘಟನೆಗಳು ಆಗಾಗ್ಗೆ ಸುದ್ದಿಯಾಗುತ್ತಿವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿರುವ ಇಂತಹದ್ದೇ ಒಂದು ಪ್ರಕರಣ ಚರ್ಚೆಗೆ ಗ್ರಾಸವಾಗಿದೆ.

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದ ಯುವಕ-ಯುವತಿ ಕಳೆದ ಗುರುವಾರ ರಾಮನಗರದಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ನವದಂಪತಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ, ಕುಟುಂಬಸ್ಥರಿಂದ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದರು.

ಜೋಡಿಯ ಮನವಿಗೆ ಸ್ಪಂದಿಸಿದ ಪೊಲೀಸ್ ಅಧಿಕಾರಿಗಳು, ಸೂಕ್ತ ಭದ್ರತೆ ನೀಡುವಂತೆ ಸೂಲಿಬೆಲೆ ಪೊಲೀಸರಿಗೆ ಸೂಚಿಸಿದ್ದರು. ಹೀಗಾಗಿ ಮದುವೆಯಾದ ಬಳಿಕ ಈ ಜೋಡಿಯ ದಾಂಪತ್ಯ ಜೀವನ ಆರಂಭವಾಗಿತ್ತು.

ಈ ನಡುವೆ ಎರಡೂ ಕುಟುಂಬಗಳ ನಡುವೆ ಉಂಟಾಗಿದ್ದ ಭಿನ್ನಾಭಿಪ್ರಾಯವನ್ನು ಬಗೆಹರಿಸಲು ಪೊಲೀಸರ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ನಡೆಸುವ ಪ್ರಯತ್ನವೂ ನಡೆದಿತ್ತು. ಬಳಿಕ ಎರಡು ದಿನಗಳ ನಂತರ ಪೊಲೀಸರು ಮತ್ತೆ ನವದಂಪತಿಯನ್ನು ಠಾಣೆಗೆ ಕರೆಸಿದ್ದರು.

ಆದರೆ ಈ ವೇಳೆ ನಡೆದ ಬೆಳವಣಿಗೆ ಪೊಲೀಸರನ್ನೇ ಅಚ್ಚರಿಗೊಳಿಸಿದೆ. ಪೋಷಕರೊಂದಿಗೆ ಮಾತನಾಡಿದ ಬಳಿಕ ನವವಧು ತನ್ನ ನಿರ್ಧಾರ ಬದಲಿಸಿಕೊಂಡಿದ್ದಾಳೆ ಎನ್ನಲಾಗಿದೆ. ತನಗೆ ಈ ಮದುವೆ ಬೇಡ ಎಂದು ಹೇಳಿದ ಆಕೆ, ತಾಳಿ ಹಾಗೂ ಕಾಲು ಚೈನು ಬಿಚ್ಚಿಕೊಟ್ಟು ಪೋಷಕರೊಂದಿಗೆ ಮನೆಗೆ ತೆರಳಿದ್ದಾಳೆ.

ಇದರಿಂದ ಪತಿ ಧನರಾಜ್ ಹಾಗೂ ಅವರ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಪತ್ನಿಯೇ ಬೇಕು, ತನಗೆ ನ್ಯಾಯ ದೊರಕಬೇಕು ಎಂದು ಧನರಾಜ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಇದೀಗ ಈ ಪ್ರಕರಣ ಸೂಲಿಬೆಲೆ ಪೊಲೀಸರಿಗೆ ಮತ್ತೊಂದು ಸವಾಲಾಗಿ ಪರಿಣಮಿಸಿದೆ. ಪ್ರೀತಿಸಿ ಮದುವೆಯಾದ ಕೆಲವೇ ದಿನಗಳಲ್ಲಿ ದಾಂಪತ್ಯದಲ್ಲಿ ಇಂತಹ ತಿರುವು ಬಂದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಭ್ರಷ್ಟರ ಬೇಟೆ

Recent Posts

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

3 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

8 hours ago

₹20 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ!

ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…

8 hours ago

ವಿವಾಹಿತ ಮಹಿಳೆ ಜೊತೆ ಬಾಯ್‌ಫ್ರೆಂಡ್‌ ಪರಾರಿ? ಕಣ್ಣೀರಿಟ್ಟ ದೆಹಲಿ ಬ್ಲಾಗರ್; “ನನ್ನನ್ನು ಬಿಟ್ಟು ಆಕೆಯಲ್ಲೇನಿತ್ತು?”

ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…

8 hours ago

ನಕಲಿ ಮಾಲೀಕರನ್ನು ನಿಲ್ಲಿಸಿ ₹1.08 ಕೋಟಿ ಮೌಲ್ಯದ ಜಮೀನು ಮಾರಾಟ: ನಾಲ್ವರ ವಿರುದ್ಧ FIR

ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…

14 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ; ವಿಚಾರಣೆಯಲ್ಲಿ ಸ್ಫೋಟಕ ಅಂಶಗಳ ಉಲ್ಲೇಖ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…

1 day ago