ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಹಿರಿಯ ನಟ ಶಾನವಾಸ್ (71) ಅವರು ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಕಳೆದ ಕೆಲ ತಿಂಗಳಿನಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಲೇ ಇರುವುದು ತಿಳಿದುಬಂದಿದೆ.
ಶಾನವಾಸ್ ಅವರು ಪ್ರಖ್ಯಾತ ನಟ ಪ್ರೇಮ್ ನಜೀರ್ ಅವರ ಪುತ್ರರಾಗಿದ್ದು, ತಮ್ಮ ಅಪ್ಪನ ಹೆಸರಿನಂತೆಯೇ ನಟನೆಯಲ್ಲಿ ವಿಶಿಷ್ಟ ಗುರುತು ಮೂಡಿಸಿಕೊಂಡವರು. ಬಾಲಚಂದ್ರ ಮೆನನ್ ನಿರ್ದೇಶನದ ‘ಪ್ರೇಮಗೀತಂಗಳ್’ ಚಿತ್ರದಿಂದ ತಮ್ಮ ಅಭಿನಯ ಪಯಣ ಆರಂಭಿಸಿದ ಅವರು, 50ಕ್ಕೂ ಹೆಚ್ಚು ಚಿತ್ರಗಳು ಹಾಗೂ ಹಲವು ಧಾರಾವಾಹಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಅವರು ಅಭಿನಯಿಸಿದ ಪ್ರಮುಖ ಚಿತ್ರಗಳಲ್ಲಿ ಮೋಹನ್ ಲಾಲ್ ಅಭಿನಯದ ‘ಚೀನಾ ಟೌನ್’ ಹಾಗೂ ಪೃಥ್ವಿರಾಜ್ ಸುಕುಮಾರನ್ ನಟನೆಯ 2022ರ ‘ಜನಗಣಮನ’ ಚಿತ್ರಗಳು ಕೊನೆಯದಾಗಿವೆ. ವಿಶಿಷ್ಟ ಶೈಲಿಯ ಅಭಿನಯ ಹಾಗೂ ಪ್ರಾಮಾಣಿಕತೆ ಇವರನ್ನು ಪ್ರೇಕ್ಷಕರ ಹೃದಯದಲ್ಲಿ ಸ್ಥಾನ ಪಡೆಯುವಂತೆ ಮಾಡಿತ್ತು.
ಶಾನವಾಸ್ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು ತಮ್ಮ ಆಘಾತ ವ್ಯಕ್ತಪಡಿಸಿ, ಕುಟುಂಬದ ಸದಸ್ಯರಿಗೆ ಸಂತಾಪ ಸೂಚಿಸಿದ್ದಾರೆ.
ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಮುಂಡಗೋಡ: 12 ವರ್ಷದ ಬಾಲಕಿಯ ಮೇಲೆ ನಡೆದಿರುವ ಅಮಾನವೀಯ…
ರಾಜಸ್ಥಾನ: ಜಿಮ್‌ನಲ್ಲಿ ಕಟ್ಟುಮಸ್ತಾದ ದೇಹದಂಡನೆ ಪ್ರದರ್ಶಿಸುವ ವಿಡಿಯೋ ಹಾಗೂ ಫೋಟೋಗಳನ್ನು ತೋರಿಸಿ 82 ವರ್ಷದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ…
ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಎಎಸ್‌ಐ ಅವರನ್ನು ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡ ಹಿನ್ನೆಲೆಯಲ್ಲಿ…
ಯಲ್ಲಾಪುರ: ತಾಲೂಕಿನ ಹುಟ್ಕಮನ ಗ್ರಾಮದಲ್ಲಿ ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಒಂಟಿಮನೆ ದರೋಡೆ ನಡೆಸಿದ್ದ ಪ್ರಕರಣವನ್ನು ಯಲ್ಲಾಪುರ ಪೊಲೀಸರು ಭೇದಿಸುವಲ್ಲಿ…
ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು…