Categories: CrimeLatest

ರೋಡ್ ರೇಜ್ ವಿವಾದದ ಬಳಿಕ ಮಾಲೂರು ನ್ಯಾಯಾಧೀಶೆ ಗಾಯತ್ರಿಗೆ ಬೀದರ್ ವರ್ಗಾವಣೆ; ಹೈಕೋರ್ಟ್ ಆಡಳಿತಾತ್ಮಕ ಕ್ರಮ

ಬೆಂಗಳೂರು: ಸಾರ್ವಜನಿಕರೊಂದಿಗೆ ರಸ್ತೆ ಮಧ್ಯೆ ಮಾತಿನ ಚಕಮಕಿ ನಡೆಸಿ ಅಧಿಕಾರ ದುರ್ಬಳಕೆ ಆರೋಪಕ್ಕೆ ಗುರಿಯಾಗಿದ್ದ ಹಾಗೂ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಗಾಯತ್ರಿ ಅವರನ್ನು ಬೀದರ್ ಜಿಲ್ಲೆಗೆ ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ (ಆಡಳಿತ) ಚಂದ್ರಶೇಖರ ರೆಡ್ಡಿ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ನ್ಯಾಯಾಧೀಶೆ ಗಾಯತ್ರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೀದರ್ ಜಿಲ್ಲೆಯ ಹುಮನಾಬಾದ್‌ನ ಪ್ರಧಾನ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ನಿಯೋಜಿಸಲಾಗಿದೆ.

ಏನಿತ್ತು ಪ್ರಕರಣ?

ಮಾಲೂರಿನಲ್ಲಿ ತಮ್ಮ ಖಾಸಗಿ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ನ್ಯಾಯಾಧೀಶೆ ಗಾಯತ್ರಿ ಮತ್ತು ಕೆ.ಎಂ. ವಿನಯ್ ಎಂಬ ಯುವಕನ ನಡುವೆ ಕ್ಷುಲ್ಲಕ ಕಾರಣಕ್ಕೆ ರಸ್ತೆ ಮಧ್ಯೆ ವಾಗ್ವಾದ ನಡೆದಿತ್ತು. ಈ ವೇಳೆ ನ್ಯಾಯಾಧೀಶೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಘಟನೆಯ ನಂತರ ವಿನಯ್, ಅವರ ತಾಯಿ ವಿ. ಕವಿತಾ ಹಾಗೂ ಅಜ್ಜ ಪಿ. ವೆಂಕಟೇಶ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಈ ಕ್ರಮಕ್ಕೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು.

ಹೈಕೋರ್ಟ್‌ನ ಕಟು ಟೀಕೆ

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ನ್ಯಾಯಾಧೀಶೆಯ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ರಸ್ತೆ ಮಧ್ಯೆ ಕಾರಿನಿಂದ ಇಳಿದು ಸಾಮಾನ್ಯ ವ್ಯಕ್ತಿಯೊಂದಿಗೆ ವಾಗ್ವಾದ ನಡೆಸಿರುವುದು ನ್ಯಾಯಾಂಗ ಅಧಿಕಾರಿಯ ಘನತೆಗೆ ತಕ್ಕದ್ದಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು. ಅಲ್ಲದೆ, ಪ್ರಭಾವಕ್ಕೆ ಒಳಗಾಗಿ ಸಂತ್ರಸ್ತರ ವಿರುದ್ಧವೇ ಪ್ರಕರಣ ದಾಖಲಿಸಿದ ಪೊಲೀಸರ ಕ್ರಮವನ್ನೂ ನ್ಯಾಯಾಲಯ ಕಟುವಾಗಿ ಟೀಕಿಸಿತ್ತು.

ಈ ಬೆಳವಣಿಗೆಗಳ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ಆಡಳಿತಾತ್ಮಕ ಕ್ರಮವಾಗಿ ನ್ಯಾಯಾಧೀಶೆ ಗಾಯತ್ರಿ ಅವರನ್ನು ಮಾಲೂರಿನಿಂದ ಬೀದರ್ ಜಿಲ್ಲೆಯ ಹುಮನಾಬಾದ್‌ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

17 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

17 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago