ಮಧ್ಯಪ್ರದೇಶದ ಮೊರೆನಾದಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಕೆಲವು ದಿನಗಳ ಬಳಿಕ, ಆತನ ಹೆಣ್ಣುಮಕ್ಕಳು ಆತನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತೋರಿಸುವ ಮನಕಲಕುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೃತನನ್ನು ಹರೇಂದ್ರ ಮೌರ್ಯ ಎಂದು ಗುರುತಿಸಲಾಗಿದ್ದು, ಆತ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅವನಿಗೆ ಮೂರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗನಿದ್ದನು. ನೆರೆಹೊರೆಯವರು ಮತ್ತು ಸಂಬಂಧಿಕರ ಪ್ರಕಾರ, ಹರೇಂದ್ರ ಪತ್ನಿಯೊಂದಿಗೆ ನಿರಂತರ ಜಗಳವಾಡುತ್ತಿದ್ದ.
ಮಾರ್ಚ್ 1 ರಂದು, ತನ್ನ ಇಬ್ಬರು ಹೆಣ್ಣುಮಕ್ಕಳ ಮದುವೆಯನ್ನು ಆಯೋಜಿಸಿದ್ದ. ಆದರೆ, ಮದುವೆಯ ನಂತರ ಪತ್ನಿ ವಿಚ್ಛೇದನ ನೀಡಿ ತಂದೆ ಮನೆಗೆ ಹೋಗುವುದಾಗಿ ಹೇಳಿದ್ದಳು. ಇದರಿಂದ ಮಾನಸಿಕವಾಗಿ ನೊಂದ ಹರೇಂದ್ರ ಒಂದು ಕೋಣೆಯಲ್ಲಿ ತನ್ನನ್ನು ತಾನೇ ಬೀಗಿಟ್ಟುಕೊಂಡಿದ್ದ. ಆತ ಹೊರಗೆ ಬಾರದಿದ್ದಾಗ, ಕುಟುಂಬಸ್ಥರು ಹುಡುಕತೊಡಗಿದರು. ಕೊನೆಗೂ ಆತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ.
ಹರೇಂದ್ರನ ಸಾವಿನ ಕುರಿತು ಎರಡೂ ದಿಕ್ಕಿನ ಆರೋಪಗಳು ಕೇಳಿಬಂದಿವೆ. ನೆರೆಹೊರೆಯವರು ಆತ ತಾನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರೆ, ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ.
ಈ ಮಧ್ಯೆ, ಫೆಬ್ರವರಿ 1ರಂದು ನಡೆದಿರುವ ಒಂದು ಭೀಕರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಲ್ಲಿ ಹರೇಂದ್ರನ ಪತ್ನಿ ಆತನ ಕಾಲು ಹಿಡಿದುಕೊಂಡಿರುವುದು ಹಾಗೂ ಹೆಣ್ಣುಮಕ್ಕಳು ಆತನನ್ನು ಕೋಲಿನಿಂದ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಆತ ನೋವಿನಿಂದ ಕಿರುಚುತ್ತಿರುವುದು ಹಾಗೂ ಮಗ ಹೊಡೆಯುವುದನ್ನು ತಪ್ಪಿಸಲು ಯತ್ನಿಸುತ್ತಿರುವುದು ಈ ದೃಶ್ಯದಲ್ಲಿ ಕಾಣಿಸಿಕೊಂಡಿದೆ.
ಈ ವೀಡಿಯೊ ವೈರಲ್ ಆಗುತ್ತಿದ್ದಂತೆ, ಹಲವಾರು ಜನ ಆ ವ್ಯಕ್ತಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಪೊಲೀಸರು ಹರೇಂದ್ರನ ಶವವನ್ನು ಗ್ವಾಲಿಯರ್ ವೈದ್ಯಕೀಯ ಕಾಲೇಜಿಗೆ ಶವಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ದೀಪಾಲಿ ಚಂದೋರಿಯಾ ತಿಳಿಸಿದ್ದಾರೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…