ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ ಪ್ರದೇಶದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಪಡಿಯಪ್ಪ ನಂದುಡಗಿ (42) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಮನೆಯ ಹತ್ತಿರದ ನಾಲಾವರಗೆ ಮೂತ್ರ ವಿಸರ್ಜನೆಗೆ ಹೋಗಿದ್ದ ವೇಳೆ, ಕೊಳಕ ಮಂಡಲ (ಕ್ರೇಟ್) ಹಾವು ಕಚ್ಚಿದ್ದು, ಕೂಡಲೇ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ವೈದ್ಯರ ಸತತ ಪ್ರಯತ್ನಕ್ಕೂ ಚಿಕಿತ್ಸೆ ಫಲಕಾರಿಯಾಗದೆ, ಪಡಿಯಪ್ಪ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಈ ಕುರಿತು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ವರದಿ: ಶಿವು ಪಿ.ಆರ್.

Related News

error: Content is protected !!