ನಗರದ ಕೆಪಿಟಿಸಿಎಲ್ ಕಚೇರಿ ಬಳಿಯ ವಿದ್ಯುತ್ ಟ್ರಾನ್ಸ್ಫಾರ್ಮರ್ ಬಳಿ ಇಂದು ಬೆಳಗಿನ ಜಾವ ದುರ್ಘಟನೆ ಸಂಭವಿಸಿದ್ದು, ಅಲ್ಲಿ ಸಿಲುಕಿದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಸುಮಾರಿಗೆ ಬೆಳಿಗ್ಗೆ 4 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಸಾವಿಗೀಡಾದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಅನುಮಾನ ಮೂಡಿದೆ. ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳದಲ್ಲಿ ಬೆಸ್ಕಾಂ ಸಿಬ್ಬಂದಿಗಳೂ ಕಾರ್ಯ ನಿರ್ವಹಿಸಿದ್ದು, ಅವರು ಮೃತದೇಹವನ್ನು ಟ್ರಾನ್ಸ್ಫಾರ್ಮರ್‌ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ನಗರಠಾಣೆಯಲ್ಲಿ ದೂರು ದಾಖಲಾಗಿದ್ದು, ವ್ಯಕ್ತಿಯ ನಿಖರ ಗುರುತು ಹಾಗೂ ಸಾವಿನ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…