ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಸಂಕೇಶ್ವರ ನಿವಾಸಿಯಾದ ಬಾಬು ಭೂಸಗೋಳ (35) ಮೃತ ವ್ಯಕ್ತಿಯಾಗಿದ್ದಾರೆ. ಮೃತರು ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಿಂದ ಮಹಿಳೆಯ ಪತಿ ಹಾಗೂ ಆತನ ಸ್ನೇಹಿತ ಸೇರಿ ಹತ್ಯೆ ನಡೆಸಿರುವ ಆರೋಪ ಕೇಳಿಬಂದಿದೆ.
ಆರೋಪಿಗಳು ಮೊದಲು ಬಾಬು ಮೇಲೆ ಹಲ್ಲೆ ನಡೆಸಿ, ಬಳಿಕ ತಲೆಗೆ ಕಲ್ಲಿನಿಂದ ಹೊಡೆದಿದ್ದಾರೆ. ನಂತರ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಗೆ ಅನೈತಿಕ ಸಂಬಂಧದ ಶಂಕೆಯ ಜೊತೆಗೆ ವೈಯಕ್ತಿಕ ವೈಷಮ್ಯವೂ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಸಂಕೇಶ್ವರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…