ಹರಿಯಾಣದ ಗುರುಗ್ರಾಮದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮದುವೆಯಾಗಿ ಕೇವಲ ಮೂರು ತಿಂಗಳಾಗಿದ್ದ ಪತ್ನಿಯೇ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಹುದು ಎಂಬ ಅನುಮಾನದಿಂದ, ಪತಿಯೊಬ್ಬ ಪ್ರೇಯಸಿಯೊಂದಿಗೆ ಸೇರಿ ಆಕೆಯನ್ನು ಗುಂಡಿಕ್ಕಿ ಕೊಲೆ ಮಾಡಿರುವ ಆರೋಪದಡಿ ಬಂಧನಕ್ಕೊಳಗಾಗಿದ್ದಾನೆ.
ಗುರುಗ್ರಾಮದ ಮಾನೇಸರ್ ನಿವಾಸಿಯಾದ 25 ವರ್ಷದ ಅಂಕಿತ್ ಈ ಪ್ರಕರಣದ ಪ್ರಮುಖ ಆರೋಪಿ. ಕಳೆದ ಮೂರು ವರ್ಷಗಳಿಂದ 38 ವರ್ಷದ ರಜನಿ ದೇವಿ ಎಂಬ ಮಹಿಳೆಯೊಂದಿಗೆ ಆತ ಆತ್ಮೀಯ ಸಂಬಂಧ ಹೊಂದಿದ್ದ. ಅಂಕಿತ್ ಮಾನೇಸರ್‌ನಲ್ಲಿ ತಂಬಾಕು ಅಂಗಡಿ ನಡೆಸುತ್ತಿದ್ದರೆ, ರಜನಿ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದಳು.
ಇವರಿಬ್ಬರ ನಡುವೆ ಸಂಬಂಧ ಮುಂದುವರಿದಿದ್ದರೂ, ಅಂಕಿತ್ ಕಳೆದ ಫೆಬ್ರವರಿಯಲ್ಲಿ 22 ವರ್ಷದ ಯುವತಿಯನ್ನು ವಿವಾಹವಾಗಿದ್ದ. ಆದರೆ ಮದುವೆಯ ಬಳಿಕವೂ ರಜನಿಯೊಂದಿಗಿನ ಸಂಬಂಧವನ್ನು ಕಡಿದುಕೊಳ್ಳದೇ, ತನ್ನ ವೈವಾಹಿಕ ಜೀವನವೇ ಮುಂದಿನ ದಿನಗಳಲ್ಲಿ ಅಡ್ಡಿಯಾಗಬಹುದು ಎಂದು ಭಾವಿಸಿ ಪತ್ನಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಹತ್ಯೆ ನಡೆಸಲು ಸುಮಾರು ಎರಡು ತಿಂಗಳ ಮೊದಲೇ ಉತ್ತರ ಪ್ರದೇಶದಿಂದ ಅಕ್ರಮವಾಗಿ ಪಿಸ್ತೂಲ್ ಖರೀದಿಸಲಾಗಿತ್ತು. ಮೇ 21ರಂದು ಅಂಕಿತ್ ತನ್ನ ಪತ್ನಿಯನ್ನು ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಬಳಿಕ ಶವವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ ಆರೋಪಿಗಳು ಹರಿದ್ವಾರದ ಮೂಲಕ ನೇಪಾಳಕ್ಕೆ ತೆರಳಿದ್ದರು.
ಮೇ 22ರಂದು ಮೃತಳ ತಾಯಿ ತನ್ನ ಮಗಳು ಕಾಣೆಯಾಗಿರುವ ಕುರಿತು ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರು ಮಾನೇಸರ್‌ನ ಬಾಡಿಗೆ ಕೊಠಡಿಯಲ್ಲಿ ಗುಂಡೇಟಿನಿಂದ ಮೃತಪಟ್ಟ ಸ್ಥಿತಿಯಲ್ಲಿ ಯುವತಿಯ ಶವವನ್ನು ಪತ್ತೆಹಚ್ಚಿದರು. ತನಿಖೆಯಲ್ಲಿ ಅಂಕಿತ್ ಮೇಲಿನ ಅನುಮಾನ ಬಲವಾಗುತ್ತಿದ್ದಂತೆ ಕ್ರೈಂ ಬ್ರಾಂಚ್ ತಂಡ ಆರೋಪಿಗಳ ಬಂಧನಕ್ಕೆ ಬಲೆ ಬೀಸಿತು.
ಜೂನ್ 30ರಂದು ಇಬ್ಬರೂ ಭಾರತಕ್ಕೆ ಮರಳಲಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಅಂಕಿತ್ ಹಾಗೂ ರಜನಿ ದೇವಿಯನ್ನು ಬಂಧಿಸಿದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ಇಬ್ಬರನ್ನೂ ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಅಕ್ರಮ ಸಂಬಂಧವನ್ನು ಮುಂದುವರಿಸುವ ಉದ್ದೇಶದಿಂದ ನವವಿವಾಹಿತ ಪತ್ನಿಯನ್ನೇ ಹತ್ಯೆ ಮಾಡಿದ ಈ ಘಟನೆ ಗುರುಗ್ರಾಮದಲ್ಲಿ ಸಂಚಲನ ಮೂಡಿಸಿದ್ದು, ವೈಯಕ್ತಿಕ ಸಂಬಂಧಗಳ ಹೆಸರಿನಲ್ಲಿ ನಡೆಯುತ್ತಿರುವ ಅಪರಾಧಗಳ ಬಗ್ಗೆ ಮತ್ತೊಮ್ಮೆ ಆತಂಕ ಹೆಚ್ಚಿಸಿದೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…