Latest

ಧ್ರುವ ಸರ್ಜಾ ವಿರುದ್ಧ ವಂಚನೆ ಆರೋಪಕ್ಕೆ ಮ್ಯಾನೇಜರ್ ಸ್ಪಷ್ಟನೆ

ಕನ್ನಡ ಸಿನಿ ಜಗತ್ತಿನಲ್ಲಿ ಸಂಚಲನ ಮೂಡಿಸಿರುವ 3 ಕೋಟಿ ರೂಪಾಯಿ ವಂಚನೆ ಆರೋಪಕ್ಕೆ ನಟ ಧ್ರುವ ಸರ್ಜಾ ಅವರ ತಂಡದಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. 2016ರ ಜಗ್ಗು ದಾದ ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕ ರಾಘವೇಂದ್ರ ಹೆಗ್ಡೆ, ಧ್ರುವ ಸರ್ಜಾ ವಿರುದ್ಧ ಹಣ ಪಡೆದು ಸಿನಿಮಾ ಮಾಡದಿರುವುದಾಗಿ ಆರೋಪ ಮಾಡಿದ್ದರು.

ಆದರೆ, ಈ ಆರೋಪವನ್ನು ಧ್ರುವ ಸರ್ಜಾ ಅವರ ಮ್ಯಾನೇಜರ್ ಅಶ್ವಿನ್ ತಳ್ಳಿಹಾಕಿದ್ದಾರೆ. “ರಾಘವೇಂದ್ರ ಹೆಗ್ಡೆ ಮಾಡಿದ ಆರೋಪ ಸಂಪೂರ್ಣ ಸುಳ್ಳು. 2018ರಲ್ಲಿ ಸೋಲ್ಜರ್ ಸಿನಿಮಾ ಮಾಡಲು ಒಟ್ಟು ₹3.15 ಕೋಟಿ ಹಣ ನೀಡಲಾಗಿತ್ತು. ಇದರಲ್ಲಿ ನಂದಿನಿ ಎಂಟರ್‌ಟೇನ್‌ಮೆಂಟ್‌ನಿಂದ ₹20 ಲಕ್ಷ ಹಾಗೂ ರಾಘವೇಂದ್ರ ಅವರಿಂದ ₹2.95 ಕೋಟಿ ಬಂದಿತ್ತು. ನಂದಿನಿ ಎಂಟರ್‌ಟೇನ್‌ಮೆಂಟ್ ಮತ್ತು ರಾಘವೇಂದ್ರ ನಡುವೆ ಸಮಸ್ಯೆ ಉಂಟಾದ ಕಾರಣ, ₹20 ಲಕ್ಷವನ್ನು ನಾವು ತಕ್ಷಣ ಹಿಂದಿರುಗಿಸಿದ್ದೇವೆ. ಉಳಿದ ಹಣಕ್ಕಾಗಿ ಸಿನಿಮಾ ಮಾಡುವ ಯೋಜನೆ ಮುಂದುವರಿಯುತ್ತಿತ್ತು. ಅವರು ಸ್ವತಃ ಮೂರು ತಿಂಗಳ ಕಾಲಾವಕಾಶ ಕೇಳಿದ್ದರು” ಎಂದು ಅಶ್ವಿನ್ ತಿಳಿಸಿದ್ದಾರೆ.

ಅವರ ಪ್ರಕಾರ, ರಾಘವೇಂದ್ರ ಅವರು ನಾಲ್ಕೂವರೆ ವರ್ಷಗಳ ನಂತರ ಮಾತ್ರ ಚಿತ್ರದ ಸ್ಕ್ರಿಪ್ಟ್‌ನ ಮೊದಲಾರ್ಧ ಕಳುಹಿಸಿದ್ದು, ಎರಡನೇ ಭಾಗ ಇನ್ನೂ ಬರಲಿಲ್ಲ. “ನಾವು ನಿರಂತರವಾಗಿ ಸಂಪರ್ಕದಲ್ಲಿದ್ದೇವೆ. ಆದರೆ, ಅವರು ಒಂದೇ ವೇಳೆ ಸಿನಿಮಾ ಬಜೆಟ್ ಹೆಚ್ಚಾಗಿದೆ, ಕನ್ನಡದಲ್ಲಿ ಬೇಡ, ತೆಲುಗು ಅಥವಾ ಹಿಂದಿಯಲ್ಲಿ ಮಾಡೋಣ ಎಂಬ ಬೇಡಿಕೆ ಇಟ್ಟರು. ಧ್ರುವ ಇದಕ್ಕೆ ಒಪ್ಪದೆ, ಕನ್ನಡದಲ್ಲೇ ಮಾಡಬೇಕು ಎಂದು ಪಟ್ಟು ಹಿಡಿದರು” ಎಂದಿದ್ದಾರೆ.

ಜೂನ್ 28ರಂದು ನಡೆದ ಸಭೆಯಲ್ಲೂ ಇದೇ ವಿಚಾರ ಮರುಕಳಿಸಿತು. ಕೊನೆಗೆ ಕನ್ನಡದಲ್ಲಿ ಸಿನಿಮಾ ಮಾಡುವ ತೀರ್ಮಾನ ಕೈಗೊಳ್ಳಲಾಯಿತು ಮತ್ತು ಅಕ್ಟೋಬರ್‌ನಿಂದ ಚಿತ್ರೀಕರಣ ಆರಂಭಿಸಲು ಒಪ್ಪಂದವಾಯಿತು. ಆದರೆ, ಜುಲೈನಲ್ಲಿ ರಾಘವೇಂದ್ರ ನೋಟಿಸ್ ಕಳುಹಿಸಿದ್ದರು. “ನಾವು ಯಾವಾಗಲೂ ಸಮಸ್ಯೆ ಬಗೆಹರಿಸಿಕೊಳ್ಳಲು ಸಿದ್ಧವಾಗಿದ್ದೇವೆ. ಹಣ ಕೊಡೋದಿಲ್ಲ ಎಂದು ಎಂದಿಗೂ ಹೇಳಿಲ್ಲ. ಅವರೇ ವಿಚಾರವನ್ನು ಮುಂದೂಡುತ್ತಿದ್ದರು. ಈಗ ಕೋರ್ಟ್‌ಗೆ ಹೋಗಿದ್ದಾರೆ. ಎಲ್ಲಾ ವಿಚಾರಗಳು ಕೋರ್ಟ್‌ನಲ್ಲಿ ಇತ್ಯರ್ಥವಾಗಲಿವೆ” ಎಂದು ಅಶ್ವಿನ್ ಸ್ಪಷ್ಟಪಡಿಸಿದ್ದಾರೆ.

ಈ ವಿವಾದ ಈಗ ನ್ಯಾಯಾಲಯದ ಹಾದಿ ಹಿಡಿದಿದ್ದು, ಅಂತಿಮ ತೀರ್ಮಾನ ಕೋರ್ಟ್‌ನಲ್ಲಿ ಹೊರಬೀಳಬೇಕಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

12 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

16 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago