ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮಾಲೂರು ಠಾಣೆಯ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದರು.
ಬಂಧಿತರಾಗಿ ಮನ್ಸೂರ್ ಹುಸೇನ್ (ವಯಸ್ಸು 34) ಮತ್ತು ದರ್ಶನ್ ರಾಜು (ವಯಸ್ಸು 20) ಗುರುತಿಸಲಾಗಿದ್ದು, ಇವರಿಂದ ಸుమಾರು 460 ಗ್ರಾಂ ಗಾಂಜಾ ಮತ್ತು ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧ್ಯಾಪಸಂದ್ರ ರಸ್ತೆಯ ಇಟ್ಟಿಗೆ ಫ್ಯಾಕ್ಟರಿ ಹಿಂಭಾಗದಲ್ಲಿರುವ ಹುಣಸೆ ಮರದ ಬಳಿ ಆರೋಪಿಗಳು ಗಾಂಜಾ ಮಾರಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣ ಸಂಬಂಧ ಮುಂದಿನ ತನಿಖೆ ಮುಂದುವರಿದಿದೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…