ಹುಬ್ಬಳ್ಳಿ, ಜೂನ್ 27 – ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ನಡೆದ ಸಂಯುಕ್ತ ತಪಾಸಣೆಯಲ್ಲಿ ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗಿದೆ. ಪ್ಲಾಟ್‌ಫಾರ್ಮ್ ಸಂಖ್ಯೆ 3ಕ್ಕೆ ಬಂದಿದ್ದ ರೈಲಿನ ಒಂದು ಬೋಗಿಯಲ್ಲಿ ಅನುಮಾನಾಸ್ಪದ ಕೆಂಪು ಬಣ್ಣದ ಚೀಲವೊಂದು ಪೊಲೀಸರಿಗೆ ಗೋಚರಿಸಿದ್ದು, ಪರಿಶೀಲನೆ ಮಾಡಿದಾಗ ಅದರಲ್ಲಿ ಗಾಂಜಾ ಇರುವುದಾಗಿ ದೃಢಪಟ್ಟಿದೆ.
ಚೀಲದಲ್ಲಿ ಅಂದಾಜು 5.123 ಕಿಲೋಗ್ರಾಂ ತೂಕದ ಗಾಂಜಾ ಇರುವುದಾಗಿ ಲೆಕ್ಕ ಹಾಕಲಾಗಿದ್ದು, ಇದರ ಮೌಲ್ಯ ಸುಮಾರು 5 ಲಕ್ಷ ರೂಪಾಯಿ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕ್ರಮವನ್ನು ರೈಲ್ವೆ ರಕ್ಷಣಾ ಪಡೆ (RPF) ಮತ್ತು ಸ್ಥಳೀಯ ರೈಲ್ವೆ ಪೊಲೀಸರು ಸಂಯುಕ್ತವಾಗಿ ಕೈಗೊಂಡಿದ್ದಾರೆ.
ಅನಾಮಧೇಯ ಚೀಲವಾಗಿರುವುದರಿಂದ ಗಾಂಜಾ ಮಾಲೀಕರ ಕುರಿತು ಇನ್ನಷ್ಟೇ ತನಿಖೆ ಮುಂದುವರೆಯುತ್ತಿದೆ. ಪ್ರಕರಣವನ್ನು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖಾ ತಂಡ ಕಾರ್ಯನಿರತವಾಗಿದೆ.
ಮಾದಕ ದ್ರವ್ಯಗಳ ಸಾಗಣೆಯನ್ನು ತಡೆಯಲು ಅಧಿಕಾರಿಗಳು ಕಠಿಣ ಕ್ರಮಗಳನ್ನು ಜಾರಿಗೊಳಿಸಿರುವುದಾಗಿ ಮೂಲಗಳು ತಿಳಿಸಿವೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…