Latest

ಧಾರವಾಡದಲ್ಲಿ ಗಾಂಜಾ ಸಾಗಾಟ ಬಯಲು: ಮೂವರು ಆರೋಪಿಗಳ ಬಂಧನ

ಧಾರವಾಡ: ಗಾಂಜಾ ಸಾಗಾಟ ಹಾಗೂ ಮಾರಾಟದಲ್ಲಿ ತೊಡಗಿದ್ದ ಮೂವರು ಶಂಕಿತರನ್ನು ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಧಾರವಾಡ ನಗರದ ರೈಲ್ವೆ ನಿಲ್ದಾಣದ ಬಳಿ ಇರುವ ನೀಲಗಿರಿ ತೋಪು ಪ್ರದೇಶದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಬೆಳಗಾವಿಗೆ ಸೇರಿದ ಮಶಾಹಿದುಲ್ಲಾ, ಅನುರಾಗ ನಾಯಕ್ ಮತ್ತು ಅಸ್ನಾನ್ ದೇಸಾಯಿ ಎಂದು ಗುರುತಿಸಲಾಗಿದೆ. ಆರೋಪಿಗಳು ಟವೇರಾ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರಿಗೆ ಲಭಿಸಿದ್ದ ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿ ಬಂಧಿಸಲಾಗಿದೆ.

ಪೊಲೀಸರ ಸೂಚನೆಯಂತೆ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ, 1 ಕಿಲೊ 263 ಗ್ರಾಂ ತೂಕದ ಗಾಂಜಾ, 2 ಮೊಬೈಲ್ ಫೋನ್‌ಗಳು ಹಾಗೂ ಒಂದು ಟವೇರಾ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಮೌಲ್ಯವನ್ನು ಅಂದಾಜು ₹25,000 ಎಂದು ತಿಳಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಿದ್ದು, ಗಾಂಜಾ ಮೂಲವೇನು? ಇದರ ಹಿಂದೆ ಇನ್ನು ಯಾರವರ ಕೈವಾಡವಿದೆಯೇ ಎಂಬುದರ ಬಗ್ಗೆ ಗಂಭೀರ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

3 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

16 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

17 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago