Categories: Latest

ರಕ್ತಸಂಬಂಧ ಮೀರಿದ ಪ್ರೀತಿಗೆ ಮದುವೆ ಮುದ್ರೆ: ಅಕ್ಕ-ತಮ್ಮ ಹಸೆಮಣೆ ಏರಿದ ವಿಲಕ್ಷಣ ಘಟನೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಮಾಜವನ್ನು ಬೆಚ್ಚಿಬೀಳಿಸುವಂತಹ ವಿಲಕ್ಷಣ ಪ್ರೇಮ ವಿವಾಹವೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ರಕ್ತಸಂಬಂಧದ ಮೇರೆಯನ್ನು ಮೀರಿ ವರಸೆಯಲ್ಲಿ ಅಕ್ಕ-ತಮ್ಮನಾಗಬೇಕಿದ್ದ ಜೋಡಿ ಇದೀಗ ಮದುವೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಮೂಲದ ಶಶಿಕಲಾ ಹಾಗೂ ಹೊಸಕೋಟೆಯ ಪ್ರವೀಣ್ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಿಶೇಷವೆಂದರೆ, ಇವರಿಬ್ಬರ ತಾಯಂದಿರು ಸ್ವಂತ ಅಕ್ಕ-ತಂಗಿಯರು. ಈ ಹಿನ್ನೆಲೆ ಶಶಿಕಲಾ ಮತ್ತು ಪ್ರವೀಣ್ ವರಸೆಯಲ್ಲಿ ಅಕ್ಕ-ತಮ್ಮನ ಸಂಬಂಧಕ್ಕೆ ಸೇರಿದವರಾಗಿದ್ದಾರೆ. ಆದರೂ ಕುಟುಂಬದ ವಿರೋಧವನ್ನು ಲೆಕ್ಕಿಸದೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು.

ಇದಕ್ಕೂ ಮುನ್ನ ಶಶಿಕಲಾಗೆ ಕುಟುಂಬಸ್ಥರು ಬೇರೊಬ್ಬ ಯುವಕನೊಂದಿಗೆ ಮದುವೆ ನಿಶ್ಚಯಿಸಿ ಲಗ್ನಪತ್ರಿಕೆಯನ್ನೂ ಹಂಚಿದ್ದರು. ಮದುವೆ ನಡೆಯಲು ಕೆಲವೇ ಕ್ಷಣಗಳು ಬಾಕಿ ಇರುವಾಗಲೇ ಶಶಿಕಲಾ ತನ್ನ ಪ್ರಿಯಕರ ಪ್ರವೀಣ್ ಜೊತೆ ಮನೆಯಿಂದ ತೆರಳಿದ್ದಾಳೆ. ಬಳಿಕ ಇಬ್ಬರೂ ಅಂಗಟ್ಟದ ಶಿವನ ದೇವಾಲಯದಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಯ ಬಳಿಕ ತಮ್ಮ ಜೀವಕ್ಕೆ ಪೋಷಕರಿಂದ ಅಪಾಯವಿದೆ ಎಂದು ಆರೋಪಿಸಿರುವ ನವದಂಪತಿ, ರಕ್ಷಣೆ ಕೋರಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಕಚೇರಿ ಆವರಣದಲ್ಲಿ ಕುಟುಂಬಸ್ಥರು ಮತ್ತು ನವಜೋಡಿ ನಡುವೆ ಭಾವನಾತ್ಮಕ ಹೈಡ್ರಾಮಾ ನಡೆದಿದ್ದು, ಮಗಳ ನಡೆ ಕಂಡ ತಾಯಿ ಕಣ್ಣೀರಿಟ್ಟ ಘಟನೆ ಗಮನಸೆಳೆದಿತು.

“ಅಕ್ಕನ ಮಗಳಾಗಿ ತಮ್ಮನನ್ನೇ ಮದುವೆಯಾಗಿದ್ದೀಯಲ್ಲಾ, ಸಮಾಜ ಇದನ್ನು ಹೇಗೆ ಒಪ್ಪಿಕೊಳ್ಳುತ್ತದೆ?” ಎಂದು ತಾಯಿ ಆಕ್ರಂದನ ವ್ಯಕ್ತಪಡಿಸಿದರೂ, ಶಶಿಕಲಾ ಮಾತ್ರ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. “ನನಗೆ ಪ್ರಿಯಕರನೇ ಸರ್ವಸ್ವ. ನಾನು ಮನೆಗೆ ಮರಳುವುದಿಲ್ಲ” ಎಂದು ಪಟ್ಟು ಹಿಡಿದಿದ್ದಾಳೆ.

ಪ್ರಸ್ತುತ ಈ ಅಪರೂಪದ ಪ್ರೇಮ ವಿವಾಹ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿಯೂ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

12 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago