Latest

ಅಪ್ರಾಪ್ತೆಯೊಂದಿಗೆ ಮದುವೆ: ರಾಯಚೂರಿನಲ್ಲಿ ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್

ರಾಯಚೂರು ಜಿಲ್ಲೆಯ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಪತಿಯನ್ನು ನದಿಗೆ ತಳ್ಳಿದ ಪ್ರಕರಣವು ಇದೀಗ ಭಾರೀ ತಿರುವು ಪಡೆದುಕೊಂಡಿದೆ. ಆರೋಪಿಯಾಗಿರುವ ಪತ್ನಿ ಅಪ್ರಾಪ್ತೆಯಾಗಿರುವುದು ಹೊಸ ತನಿಖೆಯಿಂದ ಬಹಿರಂಗವಾಗಿದೆ.

ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ರಕ್ಷಣಾ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಈ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಶಾಲಾ ದಾಖಲೆಗಳ ಪ್ರಕಾರ, ತಾತಪ್ಪನ ಪತ್ನಿಯು ಕೇವಲ 15 ವರ್ಷ 8 ತಿಂಗಳ ವಯಸ್ಸಿನ ಅಪ್ರಾಪ್ತ ಬಾಲಕಿ ಎಂಬುದು ದೃಢವಾಗಿದೆ. ಪರಿಣಾಮವಾಗಿ, ಈ ಪ್ರಕರಣವು ಕಾನೂನುಬಾಹಿರ ಬಾಲ್ಯ ವಿವಾಹವಾಗಿ ಪರಿಗಣಿಸಲಾಗಿದೆ.

ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಈ ಕುರಿತು ರಾಯಚೂರು ಜಿಲ್ಲೆಯ ಮಕ್ಕಳ ರಕ್ಷಣಾ ಇಲಾಖೆಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದನ್ನು ಅನುಸರಿಸಿ ರಾಯಚೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ದೇವಸೂಗೂರು ಗ್ರಾಮದಲ್ಲಿ ತಾತಪ್ಪನ ನಿವಾಸಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಈ ವೇಳೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಸಿಡಿಪಿಓ, ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ತಾತಪ್ಪನ ಕುಟುಂಬದವರನ್ನು ಭೇಟಿಯಾಗಿ ವಿವಾಹ ಸಂಬಂಧಿತ ಮಾಹಿತಿ ಕೇಳಿದ್ದಾರೆ. ಆದಾಗ್ಯೂ, ತಾತಪ್ಪನ ಕುಟುಂಬದಿಂದ ಯಾವುದೇ ಬರವಣಿಗೆ ದಾಖಲೆಗಳು ಸಿಕ್ಕಿಲ್ಲ. ಕೇವಲ ಮೌಖಿಕ ಮಾಹಿತಿ ನೀಡಲಾಗಿದೆ. ಅರ್ಹ ದಾಖಲೆಗಳನ್ನು ಸಲ್ಲಿಸಲು ಕುಟುಂಬದವರು ಎರಡು ದಿನಗಳ ಕಾಲಾವಕಾಶವನ್ನು ಕೇಳಿದ್ದಾರೆ.

ತಾತಪ್ಪ ಹಾಗೂ ಮದುವೆ ಸಮಾರಂಭದಲ್ಲಿ ಪಾಲ್ಗೊಂಡವರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುವ ಸಾಧ್ಯತೆ ಇದೆ. ಪ್ರಕರಣದ ಹಿನ್ನೆಲೆ, ನದಿಗೆ ತಳ್ಳಿದ ಘಟನೆ, ಮತ್ತು ಈಗ ಬಾಲ್ಯ ವಿವಾಹದ ಹಿನ್ನಲೆಯಲ್ಲಿ, ಈ ಘಟನೆಯು ಮತ್ತಷ್ಟು ಗಂಭೀರ ರೂಪ ಪಡೆದಿದ್ದು, ಅಧಿಕಾರಿಗಳು ಮುಂದಿನ ಕ್ರಮಕ್ಕೆ ತಯಾರಿ ನಡೆಸುತ್ತಿದ್ದಾರೆ.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

13 hours ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

14 hours ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

14 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

14 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

1 day ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

2 days ago