Categories: CrimeLatest

2 ಮದುವೆಯಾಗಿದ್ದರು ಅಕ್ರಮ ಸಂಬಂಧ ಹೊಂದಿದ್ದ: ಮಾಜಿ ಗ್ರಾಮಾಧ್ಯಕ್ಷನನ್ನು ಕೊಂದ ಮಹಿಳೆ-ಸಹೋದರ

ಉತ್ತರ ಪ್ರದೇಶದ ಸುಮೇರ್ಪುರ್ ಗ್ರಾಮದ ಮಾಜಿ ಅಧ್ಯಕ್ಷ ಮುಸ್ತಾಕ್ ಗುಲ್ಶನ್ ಅಲಿಯಾಸ್ ಮುನ್ನಾ, ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಪ್ರಕರಣ ಭೀಕರ ತಿರುವು ಪಡೆದುಕೊಂಡಿದ್ದು, ಇದೀಗ ಆತನ ಶವ ಕಾಲುವೆಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆ ಮತ್ತು ಆಕೆಯ ಸಹೋದರನನ್ನು ಬಂಧಿಸಿದ್ದಾರೆ.

ಮುನ್ನಾಗೆ ಈಗಾಗಲೇ ಎರಡು ಮದುವೆಯಾಗಿದ್ದು, ಇಬ್ಬರು ಪತ್ನಿಯರಿದ್ದರು. ಇದಲ್ಲದೆ, ಸುಮನ್ ದೇವಿ ಎಂಬ ವಿವಾಹಿತ ಮಹಿಳೆಯೊಂದಿಗೆ ಆತ ಅಕ್ರಮ ಸಂಬಂಧ ಹೊಂದಿದ್ದ. ಕೆಲಸದ ನಿಮಿತ್ತ ಗಂಡ ಊರಿನಿಂದ ದೂರವಾಗಿದ್ದ ಸಮಯದಲ್ಲಿ, ಏಕಾಂಗಿಯಾಗಿದ್ದ ಸುಮನ್ ದೇವಿಗೆ ಮುನ್ನಾ ಸಹಾಯ ಮಾಡುತ್ತಿದ್ದ. ಇದೇ ವೇಳೆ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು.

ಆರಂಭದಲ್ಲಿ ಯಾವುದೇ ಸಮಸ್ಯೆಗಳಿಲ್ಲದೆ ಸಾಗುತ್ತಿದ್ದ ಈ ಸಂಬಂಧ, ನಂತರ ಮುನ್ನಾ ಪದೇಪದೇ ಭೇಟಿಯಾಗಲು ಒತ್ತಾಯಿಸುವುದು ಹಾಗೂ ಬ್ಲ್ಯಾಕ್‌ಮೇಲ್ ಮಾಡುವುದರಿಂದ ಗಲಾಟೆಗೆ ಕಾರಣವಾಯಿತು. ಕಿರುಕುಳದಿಂದ ಬೇಸತ್ತ ಸುಮನ್ ದೇವಿ ಈ ಸಂಬಂಧಕ್ಕೆ ಅಂತ್ಯ ಹಾಕಲು ನಿರ್ಧರಿಸಿದರು.

ಮಾರ್ಚ್ 18ರಂದು ತನ್ನ ತಾಯಿಯ ಮನೆಗೆ ಮುನ್ನಾನನ್ನು ಕರೆಸಿಕೊಂಡ ಸುಮನ್, ಸಹೋದರನ ಜೊತೆಗೂಡಿ ಸಂಚು ರೂಪಿಸಿದ್ದರು. ಮನೆಗೆ ಬಂದ ಮುನ್ನಾ ಮೇಲೆ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದರು.

ಹತ್ಯೆಯ ನಂತರ, ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಕಾಲುವೆಗೆ ಎಸೆದು ಆರೋಪಿಗಳು ಪರಾರಿಯಾಗಿದ್ದರು. ಮುನ್ನಾ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದರು.

ತನಿಖೆ ವೇಳೆ ಮುನ್ನಾನ ಮೋಟಾರ್‌ಸೈಕಲ್ ನಿರ್ಜನ ಪ್ರದೇಶದಲ್ಲಿ ಪತ್ತೆಯಾಯಿತು. ನಂತರ ಫೋನ್ ಕಾಲ್‌ ರೆಕಾರ್ಡ್ ಪರಿಶೀಲಿಸಿದಾಗ ಸುಮನ್ ದೇವಿಯೊಂದಿಗೆ ಅವನ ಸಂಪರ್ಕ ಬಹಿರಂಗವಾಯಿತು. ಪೊಲೀಸರು ವಿಚಾರಣೆ ನಡೆಸಿದಾಗ ಸುಮನ್ ದೇವಿ ಅಪರಾಧ ಒಪ್ಪಿಕೊಂಡಳು.

ಮಾರ್ಚ್ 22ರಂದು ಕಾಲುವೆಯಿಂದ ಮುನ್ನಾನ ಮೃತದೇಹವನ್ನು ವಶಕ್ಕೆ ಪಡೆದ ಪೊಲೀಸರು, ಸುಮನ್ ದೇವಿ ಮತ್ತು ಆಕೆಯ ಸಹೋದರನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿತರ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಮುಂದುವರೆಸಿದ್ದಾರೆ.

ಮುನ್ನಾ ಮುಂಬರುವ ಗ್ರಾಮ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದ ಸಮಯದಲ್ಲೇ ಈ ಘಟನೆ ಸಂಭವಿಸಿದೆ. ಆತನಿಗೆ ಇಬ್ಬರು ಪತ್ನಿಯರು ಮತ್ತು ಒಟ್ಟು 18 ಮಕ್ಕಳು ಇದ್ದು, ಅವರನ್ನೆಲ್ಲ ಬಿಟ್ಟು ದುರ್ಘಟನೆಯಿಂದ ಸಾವನ್ನಪ್ಪಿರುವುದು ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ.

ಭ್ರಷ್ಟರ ಬೇಟೆ

Recent Posts

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…

2 hours ago

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

11 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

17 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

17 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

17 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

17 hours ago