Latest

ಮದುವೆಯಾಗು ಎಂದ ವಿವಾಹಿತ ಗೆಳತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಕ್ರೂರಿ!

ಈಗಾಗಲೇ ಮದುವೆಯಾಗಿದ್ದ ತನ್ನ ಗೆಳತಿಯನ್ನು ಕೊಲೆಮಾಡಿ, ಆಕೆಯ ದೇಹವನ್ನು ಭಾಗಗಳಾಗಿ ಕತ್ತರಿಸಿ ರಾಜಸ್ಥಾನದ ನಾಗೌರ್‌ನಲ್ಲಿ ಹಲವಾರು ಸ್ಥಳಗಳಲ್ಲಿ ಎಸೆದಿದ್ದಾನೆ. ಈ ಪ್ರಕರಣವು ದೆಹಲಿಯ ಭೀಕರವಾದ ಶ್ರದ್ಧಾ ವಾಕರ್ ಹತ್ಯೆಯನ್ನು ನೆನಪಿಸುವಂಥದ್ದಾಗಿದೆ. ಆಕೆ ಬಾಲಾಜಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಾಸರ್ ಗ್ರಾಮದ ವಿವಾಹಿತ ಮಹಿಳೆ. ಜನವರಿ 20 ರಂದು ಮುಂಡಾಸರ್‌ನಲ್ಲಿರುವ ತನ್ನ ಅತ್ತೆಯ ಮನೆಗೆ ಹೋಗುವುದಾಗಿ ಹೇಳಿ ಮಹಿಳೆ ತನ್ನ ತಾಯಿಯ ಮನೆಯನ್ನು ಬಿಟ್ಟು ಬಂದಿದ್ದಳು. ಆದರೆ, ಗಂಟೆಗಳ ನಂತರ ಆಕೆಯನ್ನು ಸಂಪರ್ಕಿಸಿದಾಗ ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು.

ಎರಡು ದಿನಗಳ ನಂತರ ಸಂತ್ರಸ್ತೆಯ ಸಂಬಂಧಿಕರು ಪೊಲೀಸರನ್ನು ಸಂಪರ್ಕಿಸಿದರು. ಪೊಲೀಸರು ಹುಡುಕಾಟ ನಡೆಸುತ್ತಿದ್ದಂತೆ ಜನವರಿ 28 ರಂದು ನಾಗೌರ್ ನಗರದ ಮಾಲ್ವಾ ರಸ್ತೆಯಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಿಂಭಾಗದ ಪೊದೆಗಳಲ್ಲಿ ಮಹಿಳೆಯ ಬಟ್ಟೆ, ಕೂದಲು, ದವಡೆ ಪತ್ತೆಯಾಗಿದೆ. ಸಂತ್ರಸ್ತೆಯ ಉಡುಪುಗಳಲ್ಲಿ ರಕ್ತದ ಕಲೆಗಳಿರುವುದು ದೃಢಪಟ್ಟ ಬಳಿಕ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿ ಆಕೆಯ ಪ್ರಿಯಕರನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ, ಮಹಿಳೆ ತನ್ನನ್ನು ಮದುವೆಯಾಗುವಂತೆ ದಿನದಿಂದ ದಿನಕ್ಕೆ ಒತ್ತಡ ಹಾಕುತ್ತಿದ್ದಳು. ಆದ್ದರಿಂದ ಕೊಲೆ ಮಾಡಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.  ಆರೋಪಿ ಕೊಲೆಯಾದ ಮಹಿಳೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ದೇವ್ರ ಗ್ರಾಮದ ಬಾವಿಯಲ್ಲಿ ದೇಹದ ಭಾಗಗಳನ್ನು ಎಸೆದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಕೊಲೆಯಾದ ಮಹಿಳೆಯ ದೇಹದ ಭಾಗಗಳನ್ನು ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಸಹ ಬಳಸಲಾಗಿದೆ. ದಿನಗಟ್ಟಲೆ ಹುಡುಕಾಟ ನಡೆಸಿದ ಪೊಲೀಸರು ಶವವನ್ನು ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ನಂತರ ಆರೋಪಿಗಳು ಪೊಲೀಸರನ್ನು ದಾರಿತಪ್ಪಿಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಯ ಪಾಲಿಗ್ರಾಫ್ ಪರೀಕ್ಷೆಯನ್ನು ಜೈಪುರದಲ್ಲಿ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago