ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ನವ ವಿವಾಹಿತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಶರಣ್ಯ (20) ಮತ್ತು ಗಿರೀಶ್ (28) ಮೃತ ದಂಪತಿಗಳಾಗಿದ್ದಾರೆ.

ಮೂರು-ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಈ ದಂಪತಿಯ ಸಂಸಾರ ದುರಂತ ಅಂತ್ಯ ಕಂಡಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಶರಣ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತ್ನಿಯ ಮೃತದೇಹವನ್ನು ಕಂಡ ಗಿರೀಶ್ ತೀವ್ರ ಆಘಾತಕ್ಕೊಳಗಾಗಿ, ಬಳಿಕ ಗ್ರಾಮದ ಹೊರವಲಯದ ಹೊಲದ ಬಳಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ದಂಪತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಪಟ್ಟನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (UDR) ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related News

error: Content is protected !!