Categories: CrimeLatest

ಪ್ರಿಯಕರನ ಜೊತೆ ಬಂದಿದ್ದ ವಿವಾಹಿತೆ ಭೀಕರ ಕೊಲೆ! ಮನೆಯಲ್ಲೇ ಶವ ಬಿಟ್ಟು ಆರೋಪಿ ಪರಾರಿ

ಬೆಂಗಳೂರು: ನಗರದ ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಕೊಲೆ ನಡೆದ ಬಳಿಕ ಶವವನ್ನು ಮನೆಯೊಳಗೇ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಇಳಕಲ್ ಮೂಲದ ಅಕ್ಷತಾ (30) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ನಾನಾ ಸಾಹೇಬ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಜಿಗಣಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಜೂನ್ 20ರಂದು ಪಟಾಲಮ್ಮ ಬಡಾವಣೆಯ ಬಾಡಿಗೆ ಮನೆಯೊಂದರಿಂದ ತೀವ್ರ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅನುಮಾನಗೊಂಡ ಮನೆ ಮಾಲೀಕರು ಕಿಟಕಿಯಿಂದ ಒಳಗೆ ನೋಡಿದಾಗ ಅಕ್ಷತಾ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆರಂಭದಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಿಸಲಾಗಿತ್ತು.

ಆದರೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅಕ್ಷತಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಇದರಿಂದ ಪೊಲೀಸರು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಪತಿ-ಮಕ್ಕಳನ್ನು ತೊರೆದು ಪ್ರಿಯಕರನ ಜೊತೆ ಜೀವನ

ಅಕ್ಷತಾ ಅವರು 2014ರಲ್ಲಿ ಕೃಷ್ಣ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಒಬ್ಬ ಗಂಡು ಮತ್ತು ಒಬ್ಬ ಹೆಣ್ಣು ಮಗು ಇದೆ. ಕೃಷ್ಣ ಮರದ ಕೆಲಸ ಮಾಡುತ್ತಿದ್ದರೆ, ಅಕ್ಷತಾ ಸೀರೆ ನೇಯ್ಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಾನಾ ಸಾಹೇಬ್‌ನೊಂದಿಗೆ ಅಕ್ಷತಾಗೆ ಪರಿಚಯವಾಗಿ, ಬಳಿಕ ಅದು ಪ್ರೇಮಸಂಬಂಧಕ್ಕೆ ತಿರುಗಿತ್ತು. ನಂತರ ಅಕ್ಷತಾ ತನ್ನ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ನಾನಾ ಸಾಹೇಬ್ ಜೊತೆ ಜಿಗಣಿಗೆ ಬಂದಿದ್ದಳು ಎನ್ನಲಾಗಿದೆ.

ಗಂಡ-ಹೆಂಡತಿ ಎಂದು ಹೇಳಿ ಬಾಡಿಗೆ ಮನೆ

ಕಳೆದ ನವೆಂಬರ್‌ನಲ್ಲಿ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ಅಕ್ಷತಾ ಮತ್ತು ನಾನಾ ಸಾಹೇಬ್ ತಾವಿಬ್ಬರು ಗಂಡ-ಹೆಂಡತಿ ಎಂದು ಪರಿಚಯಿಸಿಕೊಂಡು ಬಾಡಿಗೆ ಮನೆ ಪಡೆದಿದ್ದರು. ಅಲ್ಲಿಯೇ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ನಡುವೆ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಗಲಾಟೆಯ ಹಿನ್ನೆಲೆ ನಾನಾ ಸಾಹೇಬ್ ಅಕ್ಷತಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಜಿಗಣಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿ ವ್ಯಾಪಕ ಶೋಧ ಕಾರ್ಯ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

2 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago