Latest

ಮೈಸೂರಿನಲ್ಲಿ ಭಾರೀ ಡ್ರಗ್ಸ್ ದಂಧೆ ಬಯಲು:ನಗರದ ಹೊರವಲಯದಲ್ಲಿ ಎಂಡಿಎಂಎ ತಯಾರಿಕಾ ಘಟಕ ಪತ್ತೆ

ಮೈಸೂರು, ಜುಲೈ 27: ಸಾಂಸ್ಕೃತಿಕ ರಾಜಧಾನಿಯಾಗಿ ಹೆಸರುವಾಸಿಯಾದ ಮೈಸೂರು ಇದೀಗ ಮಾದಕ ವಸ್ತು ದಂಧೆಯಿಂದ ಕಲೆಂಕಿತವಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರ ಪೊಲೀಸರು ಮೈಸೂರು ಹೊರವಲಯದಲ್ಲಿ ನಡೆಸಿದ ಸರ್ಪಗಾಳದ ದಾಳಿಯಲ್ಲಿ ಲಕ್ಷಾಂತರ ರೂಪಾಯಿಗಳ ಮೌಲ್ಯದ ಎಂಡಿಎಂಎ (ಮೆಥಿಲೆನೆ ಡಯಾಕ್ಸಿ ಮೆಥಾಂಫೆಟಮಿನ್) ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದು, ಈ ಘಟಕ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಚಾರ ಇಂದು ಬಹಿರಂಗವಾಗಿದೆ.

ಮಹಾರಾಷ್ಟ್ರದಲ್ಲಿ ಬಂಧಿತನಾಗಿದ್ದ ಡ್ರಗ್ ಪೆಡ್ಲರ್ ಒಬ್ಬನು ವಿಚಾರಣೆಯ ವೇಳೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕವಿದೆ ಎಂಬ ಮಾಹಿತಿಯನ್ನು ಒದಗಿಸಿದ್ದ. ಈ ಮಾಹಿತಿಯ ಆಧಾರದ ಮೇಲೆ ಮಹಾರಾಷ್ಟ್ರದ ವಿಶೇಷ ಪೊಲೀಸ ಪಡೆ ಮೈಸೂರಿನ ರಿಂಗ್‌ರೋಡ್ ಬಳಿ ಗ್ಯಾರೇಜ್ ನಲ್ಲಿ ನಡೆಯುತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತು.

ದಾಳಿಯ ವೇಳೆ ಕೋಟ್ಯಾಂತರ ಮೌಲ್ಯದ ಎಂಡಿಎಂಎ ಸೆರೆಯಾಗಿದೆ. ಅಂತರ್ಜಾತಿ ಮಾದಕ ವಸ್ತು ಮಾರುಕಟ್ಟೆಯಲ್ಲಿ ಇದೊಂದು ಕೆಜಿಗೆ ₹2 ಕೋಟಿಯಷ್ಟು ಬೆಲೆ ಬಾಳುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟಕದಿಂದ ದೇಶದ ಹಲವು ರಾಜ್ಯಗಳಷ್ಟೇ ಅಲ್ಲದೆ ವಿದೇಶಗಳಿಗೂ ಮಾದಕ ವಸ್ತುಗಳನ್ನು ಪೂರೈಸಲಾಗುತ್ತಿತ್ತು ಎಂಬ ಅಂಶ ಸದ್ಯಕ್ಕೆ ಬೆಳಕಿಗೆ ಬಂದಿದೆ.

ಮೈಸೂರಿನಂತಹ ಶಾಂತ ಪ್ರದೇಶದಲ್ಲಿ ಇಂತಹ ತಯಾರಿಕಾ ಘಟಕ ಅಡಗಿಸಿಡಲಾಗಿದ್ದೇ ಪೊಲೀಸರಿಗೂ ಅಚ್ಚರಿ ಮೂಡಿಸಿದೆ. ಗ್ಯಾರೇಜ್ ಎನ್ನುವ ಹೆಸರಿನಲ್ಲಿ ಈ ಮಾದಕ ದಂಧೆ ಕಾರ್ಯ ನಿರ್ವಹಿಸುತ್ತಿದ್ದಂತೆಯೇ ಪ್ರಕರಣದಿಂದ ಬಹಿರಂಗವಾಗಿದೆ.

ಈ ಕುರಿತು ಹೆಚ್ಚಿನ ತನಿಖೆ ಆರಂಭವಾಗಿದ್ದು, ಘಟಕದ ಹಿಂದಿರುವ ಪ್ರಮುಖ ಮಾಸ್ಟರ್‌ಮೈಂಡ್‌ಗಳ ಪತ್ತೆಗಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಇಂತಹ ಅಕ್ರಮ ಚಟುವಟಿಕೆಯಿಂದ ಮೈಸೂರಿನ ಇಮೇಜ್‌ಗೆ ಧಕ್ಕೆಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

4 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

8 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

11 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

16 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago