Categories: CrimeLatest

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು ಬಂಧಿಸಿದ್ದಾರೆ. ವಿವಿಧ ಠಾಣೆಗಳ ಸಂಯುಕ್ತ ದಾಳಿಯಲ್ಲಿ ₹36.67 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ನೇತೃತ್ವದಲ್ಲಿ ಬಾಗಲೂರು, ಆಡುಗೋಡಿ, ಚಿಕ್ಕಜಾಲ, ಎಚ್‌ಎಸ್‌ಆರ್‌ ಲೇಔಟ್‌, ಯಶವಂತಪುರ, ಜಾಲಹಳ್ಳಿ ಮತ್ತು ಜ್ಞಾನಭಾರತಿ ಠಾಣೆಗಳ ಪೊಲೀಸರು ಕಾರ್ಯಾಚರಣೆ ನಡೆಸಿದರು. ದಾಳಿಯಲ್ಲಿ 9.64 ಗ್ರಾಂ ಎಂಡಿಎಂಎ, 5 ಕೆಜಿ ಹೈಡ್ರೋ ಗಾಂಜಾ, 19,755 ಎಲ್‌ಎಸ್‌ಡಿ ಸ್ಟ್ರಿಪ್ಸ್‌, 11.4 ಕೆಜಿ ಗಾಂಜಾ, 156 ಗ್ರಾಂ ಹೆರಾಯಿನ್‌, 618 ಗ್ರಾಂ ಚರಸ್ ಹಾಗೂ 332 ಗ್ರಾಂ ಕೊಕೇನ್ ಸೇರಿ ಅಪಾರ ಪ್ರಮಾಣದ ಡ್ರಗ್ಸ್ ಜಪ್ತಿಯಾಗಿದೆ.

ಬಂಧಿತರ ಪೈಕಿ ನಾಲ್ವರು ವಿದೇಶಿ ಪ್ರಜೆಗಳು, ಎಂಟು ಮಂದಿ ಹೊರ ರಾಜ್ಯದವರು ಮತ್ತು ನಾಲ್ವರು ಸ್ಥಳೀಯರು ಸೇರಿದ್ದಾರೆ. ಆರೋಪಿಗಳು ಅಂತರ್‌ರಾಜ್ಯ ಹಾಗೂ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದೊಂದಿಗೆ ಸಂಪರ್ಕ ಹೊಂದಿದ್ದು, ಡಾರ್ಕ್‌ನೆಟ್ ಮೂಲಕ ಮಾದಕ ವಸ್ತುಗಳನ್ನು ಖರೀದಿಸಿ ಕಾಲೇಜು ವಿದ್ಯಾರ್ಥಿಗಳು ಮತ್ತು ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

₹11 ಕೋಟಿ ಮೌಲ್ಯದ ಎಲ್‌ಎಸ್‌ಡಿ ವಶ

ಬಾಗಲೂರು ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಮಹಮ್ಮದ್ ರಫಿ ಮತ್ತು ಅಜ್ಮಲ್ ಎಂಬ ಇಬ್ಬರನ್ನು ಬಂಧಿಸಿ, ₹11.87 ಕೋಟಿ ಮೌಲ್ಯದ 19,755 ಎಲ್‌ಎಸ್‌ಡಿ ಸ್ಟ್ರಿಪ್ಸ್ ಹಾಗೂ 315 ಗ್ರಾಂ ಚರಸ್ ವಶಪಡಿಸಿಕೊಂಡಿದ್ದಾರೆ. ರಫಿ ವೃತ್ತಿಪರ ಡ್ರಗ್ಸ್ ಪೆಡ್ಲರ್ ಆಗಿದ್ದು, ಬಟ್ಟೆ ವ್ಯಾಪಾರದ ಆವರಣದಲ್ಲಿ ಈ ದಂಧೆ ನಡೆಸುತ್ತಿದ್ದನೆಂದು ತಿಳಿದುಬಂದಿದೆ. ಥೈಲ್ಯಾಂಡ್‌ಗೆ ತೆರಳಿ ಅಲ್ಲಿಂದ ಡ್ರಗ್ಸ್ ತರಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ವಿದೇಶಿಯರಿಂದ ₹17.5 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ

ಸಿಸಿಬಿ ನಡೆಸಿದ ಮತ್ತೊಂದು ದಾಳಿಯಲ್ಲಿ ನೈಜೀರಿಯಾ ಮೂಲದ ವಾಲೆಂಟಿನ್ ನಾಲ್ವಬ್ಲಿ ಮತ್ತು ಅಬ್ರೋಸ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಇವರಿಂದ 5.155 ಕೆಜಿ ಎಂಡಿಎಂಎ, 5.195 ಗ್ರಾಂ ಹೈಡ್ರೋ ಗಾಂಜಾ, 332 ಗ್ರಾಂ ಕೊಕೇನ್ ಹಾಗೂ 315 ಗ್ರಾಂ ಗಮ್ಮೀಸ್ ಸೇರಿ ₹17.50 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಿಸಿಬಿ ಡಿಸಿಪಿ-2 ರಾಜಾ ಇಮಾಮ್ ಕಾಸಿಂ ಮಾರ್ಗದರ್ಶನದಲ್ಲಿ ಎಸಿಪಿ ಎಂ.ಎನ್‌. ನಾಗರಾಜ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

4 ತಿಂಗಳಲ್ಲಿ ₹130 ಕೋಟಿ ಡ್ರಗ್ಸ್ ಜಪ್ತಿ

ಬೆಂಗಳೂರು ಪೊಲೀಸರು ಕಳೆದ ನಾಲ್ಕು ತಿಂಗಳಲ್ಲಿ ₹130 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, 2,600ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ 256 ಮಂದಿ ಪೆಡ್ಲರ್‌ಗಳು ಮತ್ತು 1,703 ಮಂದಿ ವ್ಯಸನಿಗಳು ಸೇರಿದ್ದಾರೆ. ಒಟ್ಟು 1,959 ಪ್ರಕರಣಗಳು ದಾಖಲಾಗಿದ್ದು, ಬಂಧಿತರ ಪೈಕಿ 2,591 ಮಂದಿ ಸ್ಥಳೀಯರು ಹಾಗೂ 21 ಮಂದಿ ವಿದೇಶಿಯರು ಸೇರಿದ್ದಾರೆ.

ಡ್ರಗ್ಸ್ ಜಾಲವನ್ನು ನಿರ್ಮೂಲ ಮಾಡುವ ನಿಟ್ಟಿನಲ್ಲಿ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆ ಶ್ಲಾಘನೀಯ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. “ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕಠಿಣ ಕ್ರಮಗಳು ಮುಂದುವರೆಯುತ್ತವೆ. ಯಾರೇ ಈ ದಂಧೆಯಲ್ಲಿ ತೊಡಗಿದರೂ ಕಾನೂನು ಕ್ರಮ ತಪ್ಪದು” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

47 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago