ಹಾವೇರಿ: ಕರ್ತವ್ಯ ವೇಳೆಯಲ್ಲಿ ಕಚೇರಿಗೆ ಹಾಜರಾಗದ ಕಾರಣಕ್ಕೆ ಮೆಡ್ಲೇರಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ರವಿಕುಮಾರ್ ಎಚ್. ಅವರನ್ನು ಅಮಾನತುಗೊಳಿಸಲಾಗಿದೆ.
ರವಿಕುಮಾರ್ ರವರು ರಾಹುತನಕಟ್ಟಿಯಲ್ಲಿ ಸ್ಥಾಯಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರು ತಾತ್ಕಾಲಿಕವಾಗಿ ಮೆಡ್ಲೇರಿ ಗ್ರಾಮ ಪಂಚಾಯಿತಿಗೆ ಸಹ ಪ್ರಭಾರ ಪಿಡಿಒ ಆಗಿ ನೇಮಕಗೊಂಡಿದ್ದರು.
ಇತ್ತೀಚೆಗೆ ಹಾವೇರಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ರುಚಿ ಬಿಂದಲ್ ಅವರು ಮೆಡ್ಲೇರಿ ಗ್ರಾಮ ಪಂಚಾಯಿತಿಗೆ ಹಠಾತ್ ಭೇಟಿ ನೀಡಿದ ಸಂದರ್ಭದಲ್ಲಿ, ಪಿಡಿಒ ಕಚೇರಿಗೆ ಹಾಜರಾಗಿರಲಿಲ್ಲ. ತಕ್ಷಣವೇ ಅವರು ರಾಹುತನಕಟ್ಟಿ ಗ್ರಾಮ ಪಂಚಾಯಿತಿಗೂ ಭೇಟಿ ನೀಡಿದಾಗ, ಅಲ್ಲಿಯೂ ಪಿಡಿಒ ಉಪಸ್ಥಿತರಿರಲಿಲ್ಲ.
ಕರ್ತವ್ಯ ಕಾಲದಲ್ಲಿ ಕಾರ್ಯಸ್ಥಳದಲ್ಲಿ ಲಭ್ಯವಿರದಿರುವುದು ಸರ್ವಸಾಧಾರಣ ನಿರ್ಲಕ್ಷ್ಯವೆಂದು ಪರಿಗಣಿಸಿದ ಸಿಇಒ, ಪಿಡಿಒ ರವಿಕುಮಾರ್ ಎಚ್. ವಿರುದ್ಧ ತಾತ್ಕಾಲಿಕ ಅಮಾನತು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಮುಂದಿನ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗಲಿದೆ.
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…