ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಿಲ್ಲೋದ್ ತಾಲೂಕಿನ ಹಳ್ಳಿಯೊಂದರಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಮಧ್ಯರಾತ್ರಿ ಮನೆಯೊಳಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ವಿವಾಹಿತ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ನಡೆಸಿ, ಆಕೆಯ ಪತಿಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.
ಶುಕ್ರವಾರ ರಾತ್ರಿ ಮಹಿಳೆ ಮನೆಯಲ್ಲಿದ್ದ ವೇಳೆ ಆರೋಪಿಗಳು ಬಲವಂತವಾಗಿ ಒಳನುಗ್ಗಿ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಮಹಿಳೆಯ ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಪತಿ, ಆರೋಪಿಗಳ ವಿರುದ್ಧ ಹೋರಾಟ ನಡೆಸಿ ಪತ್ನಿಯನ್ನು ರಕ್ಷಿಸಲು ಯತ್ನಿಸಿದ್ದಾರೆ.
ಈ ವೇಳೆ ಆರೋಪಿಗಳು ಪತಿಯನ್ನು ಮನಸೋಇಚ್ಛೆ ಥಳಿಸಿದ್ದು, ಈ ಹಲ್ಲೆ ಹಾಗೂ ಘಟನೆಯ ಆಘಾತದಿಂದ ಪತಿಗೆ ಹೃದಯಾಘಾತ ಉಂಟಾಗಿ ಸ್ಥಳದಲ್ಲೇ ಸಾವನ್ನಪ್ಪಿದರೆಂದು ತಿಳಿದುಬಂದಿದೆ.
ಘಟನೆ ನಂತರ ಧೈರ್ಯ ತೋರಿದ ಮಹಿಳೆ ಸಿಲ್ಲೋದ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.
ನವದೆಹಲಿ: ಪ್ರಿಪೇಯ್ಡ್ ಮೊಬೈಲ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಜಾರಿಗೆ ತಂದಿದೆ. ಟೆಲಿಕಾಂ ಕನ್ಸ್ಯೂಮರ್ ಪ್ರೊಟೆಕ್ಷನ್ (ಥರ್ಟೀನ್ತ್ ಅಮೆಂಡ್‌ಮೆಂಟ್)…
ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು,…
ಮಂಗಳೂರು: ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…
ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…