Latest

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಆರೋಪದ ನಡುವೆಯೇ ಶಾಸಕರ ಪುತ್ರನಿಗೆ ಹಾಲಿನ ಅಭಿಷೇಕ!: ನ್ಯಾಯ ವ್ಯವಸ್ಥೆಗೆ ಸವಾಲು?

ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ ಕೈಗೊಂಡ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ಶಾಸಕರ ಪುತ್ರನ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಉಗ್ರ ಪ್ರತಿಭಟನೆ ನಡೆಸಿವೆ. ಈ ಸಂಬಂಧ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

ಆದರೆ, ಈ ಆರೋಪಗಳನ್ನು ರಾಜಕೀಯ ಪ್ರೇರಿತವೆಂದು ಖಂಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕರ ಅಭಿಮಾನಿಗಳು, ಭಾನುವಾರ ಬಸವೇಶನಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭ, ನಗರಸಭೆ ಅಧ್ಯಕ್ಷರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಮಹಾತ್ಮಗಾಂಧಿ ರಸ್ತೆಯಲ್ಲಿ ಬೈಕ್ ರ್‍ಯಾಲಿ ನಡೆಸಿ, ಶಾಸಕರ ಪುತ್ರನ ಪರ ಘೋಷಣೆಗಳನ್ನು ಕೂಗಿದರು.

ಶಾಸಕರ ಪುತ್ರನ ವಿರುದ್ಧದ ಆರೋಪಗಳು ಸುಳ್ಳು ಹಾಗೂ ರಾಜಕೀಯ ಕುತಂತ್ರದ ಭಾಗವೆಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದ ಶುರುವಾಗಿದೆ.

nazeer ahamad

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

25 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago