ರಾಜಧಾನಿ ಬೆಂಗಳೂರಿನಲ್ಲಿ ಗಣಿ ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕ ಪ್ರತಿಮಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದನ್ನು ಲಭ್ಯವಾಗಿದ್ದು, ಕಲ್ಲು ಕ್ವಾರಿ ನಿಲ್ಲಿಸಿದ್ದಕ್ಕೆ ಪ್ರತಿಮಾ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಗಣಿ-ಭೂ ವಿಜ್ಞಾನಿ ಅಧಿಕಾರಿ ಪ್ರತಿಮೆ ಹತ್ಯೆ ಸಂಬಂಧ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸದಿದು, ಕಲ್ಲು ಕ್ವಾರಿ ನಿಲ್ಲಿಸಿದ್ದಕ್ಕೆ ಪ್ರತಿಮಾ ಕೊಲೆ ಮಾಡಿರುವ ಅನುಮಾನ ಇದೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಪ್ರತಿಮಾ ಅವರು ಅಕ್ರಮ ಗಣಿಗಾರಿಕೆ ಸಂಬಂಧ ವರದಿ ನೀಡಿದ್ದರು. ಸರ್ವೆ ನಂಬರ್ 177, 179 ಭಾಗದಲ್ಲಿ ದೂರು ಬಂದಿತ್ತು.
ಬೆಂಗಳೂರು ನಗರ ಜಿಲ್ಲೆ ಹುಣಸಮಾರನಹಳ್ಳಿ ಗ್ರಾಮದಲ್ಲಿ ಲೈಸೆನ್ಸ್ ಪಡೆಯದೇ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದರು. ಹೀಗಾಗಿ ದೂರಿನ್ವಯ ಸ್ಥಳ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಬಳಿಕ ಕಲ್ಲು ಕ್ವಾರಿಯನ್ನು ಸ್ಥಗಿತಗೊಳಿಸಿದ್ದ ಡಿಡಿ ಪ್ರತಿಮಾ ಕೊಲೆ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಡಿಡಿ ಪ್ರತಿಮಾ ಕೊಲೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪ್ರತಿಮಾ ಕೊಲೆ ವಿಚಾರ ಈಗಷ್ಟೇ ತಿಳಿದುಬಂದಿದೆ. ಪ್ರತಿಮಾ ಕೊಲೆ ವಿಚಾರವನ್ನು ತನಿಖೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…