Categories: Latest

ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಗರಂ: ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮಕ್ಕೆ ಖಡಕ್ ಸೂಚನೆ

ರಾಜ್ಯದ ವಿವಿಧ ನಗರಗಳಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಹಾಗೂ ಕುಡಿಯುವ ನೀರು ಸರಬರಾಜು ಯೋಜನೆಗಳ ಕಾಮಗಾರಿ ವಿಳಂಬದ ಬಗ್ಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಯಾವುದೇ ದಾಕ್ಷಿಣ್ಯ ತೋರದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಬೆಂಗಳೂರಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿ, ನಿಗದಿತ ಗಡುವಿನೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರಿಗೆ ತ್ವರಿತವಾಗಿ ಮೂಲಸೌಕರ್ಯ ಸೌಲಭ್ಯಗಳು ದೊರೆಯುವಂತೆ ಕಾರ್ಯನಿರ್ವಹಿಸಬೇಕೆಂದು ಅವರು ತಿಳಿಸಿದರು.

ವಿಶ್ವ ಬ್ಯಾಂಕ್ ನೆರವಿನ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯಡಿ ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಈ ಯೋಜನೆಯಿಂದ 27 ಲಕ್ಷಕ್ಕೂ ಹೆಚ್ಚು ಜನರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು. ಬೆಳಗಾವಿಯ ಕಾಮಗಾರಿ ಇದೇ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಯೋಜನೆಗಳನ್ನು 2027ರ ಜೂನ್ ಒಳಗೆ ಮುಗಿಸುವ ಗುರಿ ಹೊಂದಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ಇತ್ತೀಚೆಗೆ ಕಲಬುರಗಿಗೆ ಭೇಟಿ ನೀಡಿದ್ದ ವೇಳೆ ನೀರು ಶುದ್ಧೀಕರಣ ಘಟಕ ಹಾಗೂ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ್ದಾಗಿ ತಿಳಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಅಲ್ಲಿನ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಹಾಗೂ ಸುಸ್ಥಿರ ನಗರಾಭಿವೃದ್ಧಿಗೆ ವೇಗ ನೀಡುವ ಉದ್ದೇಶದಿಂದ KUIDFC ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅವುಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು.

ಸಭೆಯಲ್ಲಿ KUIDFC ವ್ಯವಸ್ಥಾಪಕ ನಿರ್ದೇಶಕ ಟಿ. ಭೂಬಾಲನ್, ಮುಖ್ಯ ಇಂಜಿನಿಯರ್‌ಗಳಾದ ಜೆ.ಆರ್. ನಂದೀಶ್, ಕೆ.ಪಿ. ಜಯರಾಮ್, ಅಧೀಕ್ಷಕ ಇಂಜಿನಿಯರ್ ಪದ್ಮನಾಭನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

11 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

11 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

11 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

1 day ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

1 day ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

1 day ago