ನಂಜನಗೂಡು; ಶಾಲೆಯಿಂದ ವಿಧ್ಯಾರ್ಥಿನಿಯನ್ನ ಮನೆಗೆ ಕರೆತಂದ ಸ್ವಂತ ಚಿಕ್ಕಪ್ಪನೇ ಅತ್ಯಾಚಾರವೆಸಗಿ ಅಪ್ರಾಪ್ತ ಬಾಲಕಿ ಗರ್ಭವತಿಯಾಗುವಂತೆ ಮಾಡಿರುವ ಅಮಾನವೀಯ ಘಟನೆ ನಂಜನಗೂಡು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ನಂಜನಗೂಡು ಪಟ್ಟಣದಲ್ಲಿ ಘಟನೆ ನಡೆದಿದ್ದು 10 ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಆತನ ಚಿಕ್ಕಪ್ಪನೆೇ ಅತ್ಯಾಚಾರವೆಸಗಿ ಸಿಕ್ಕಿಬಿದ್ದಿದ್ದಾನೆ .ಕಾಮುಕ ಚಿಕ್ಕಪ್ಪನನ್ನ ಪೊಲೀಸರು ಬಂದಿಸಿ ಕಂಬಿ ಎಣಿಸಲು ಕಳಿಸಿದ್ದಾರೆ.
ಕಳೆದ ಮೂರು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಮನೆಯವರು ಬಾಲಕಿಯನ್ನ ವೈದ್ಯರ ಬಳಿ ಪರಿಶೀಲನೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.ಬಾಲಕಿಯ ಚಿಕ್ಕಪ್ಪ ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಕಾಮುಕ. 10 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನ ಜನವರಿಯಲ್ಲಿ ಪುಸಲಾಯಿಸಿ ಮನೆಗೆ ಕರೆತಂದಿದ್ದಾನೆ.ನಂತರ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಯಾರಿಗೂ ತಿಳಿಸಬಾರದೆಂದು ಬೆದರಿಸಿ ಮತ್ತೆ ಶಾಲೆಗೆ ಬಿಟ್ಟಿದ್ದಾನೆ. ದಿನ ಕಳೆದಂತೆ ಪೀರಿಯೆಡ್ಸ್ ನಲ್ಲಿ ವೆತ್ಯಾಸ ಕಂಡು ಬಂದು ವೈದ್ಯರ ಬಳಿ ತೆರಳಿದಾಗ ಬಾಲಕಿ 3 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ಮಕ್ಕಳ ಮತ್ತು ಮಹಿಳಾ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಬಾಲಕಿಯನ್ನ ತಮ್ಮ ವಶಕ್ಕೆ ಪಡೆದಿದ್ದಾರೆ.
ನಂಜುಂಡಸ್ವಾಮಿ ವಿರುದ್ದ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ.ಎಸ್.ಎಸ್.ಎಲ್.ಸಿ.ಪರೀಕ್ಷೆಗಳು ನಡೆಯುತ್ತಿರುವುದರಿಂದ ನೊಂದ ಬಾಲಕಿಯನ್ನ ಮೈಸೂರಿನ ಬಾಲಮಂದಿರದಿಂದ ಪರೀಕ್ಷಾ ಕೇಂದ್ರಕ್ಕೆ ಪೊಲೀಸರ ಭದ್ರತೆಯೊಂದಿಗೆ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ. ವರದಿ: ಮೋಹನ್
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…