ಹಾಸನ ಜಿಲ್ಲೆಯ ಅರಕಲಗೂಡು ಪೊಲೀಸ್ ಠಾಣೆಯ ಸಿಬ್ಬಂದಿ ಜಗದೀಶ್ ಅವರನ್ನು ಕರ್ತವ್ಯ ಲೋಪ, ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ ಹಾಗೂ ನ್ಯಾಯಾಧೀಶರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಗಳ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಲಭ್ಯ ಮಾಹಿತಿಯ ಪ್ರಕಾರ, ಜೂನ್ 28ರಂದು ರಾತ್ರಿ ಇಆರ್‌ಎಸ್‌ಎಸ್ (ERSS) ಕರ್ತವ್ಯದಲ್ಲಿದ್ದ ಜಗದೀಶ್ ಅವರಿಗೆ ಅರಕಲಗೂಡು ಪಟ್ಟಣದ ಅನಕೃ ವೃತ್ತದ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನ್ಯಾಯಾಧೀಶ ಲೋಕೇಶ್ ಸೂಚಿಸಿದ್ದರು. ಆದರೆ, ಈ ಸೂಚನೆಯನ್ನು ಪಾಲಿಸದೇ ಜಗದೀಶ್ ಉದ್ಧಟತನದಿಂದ ವರ್ತಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಉಂಟಾದ ವಾಗ್ವಾದದ ಸಂದರ್ಭದಲ್ಲಿ ನ್ಯಾಯಾಧೀಶರ ಮೊಬೈಲ್ ಫೋನ್ ಕಸಿದುಕೊಳ್ಳಲು ಜಗದೀಶ್ ಯತ್ನಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಸ್ಥಳದಲ್ಲಿದ್ದ ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರೂ, ಜಗದೀಶ್ ತಮ್ಮ ವರ್ತನೆಯನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದರು ಎಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯಲ್ಲಿ, ಕರ್ತವ್ಯದ ವೇಳೆ ಇಲಾಖೆಯ ಇಆರ್‌ಎಸ್‌ಎಸ್ ವಾಹನ ಬಳಸದೇ ಖಾಸಗಿ ವಾಹನದಲ್ಲಿ ತೆರಳಿರುವುದು, ನ್ಯಾಯಾಂಗದ ಪ್ರತಿನಿಧಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿರುವುದು ಹಾಗೂ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ವರ್ತಿಸಿರುವುದು ಬೆಳಕಿಗೆ ಬಂದಿದೆ.
ಈ ಎಲ್ಲ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ಅನ್ವಯ ಜಗದೀಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ಕುರಿತು ಇಲಾಖಾ ತನಿಖೆ ಮುಂದುವರಿದಿದೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…