ಯಾದಗಿರಿ ಜಿಲ್ಲೆ ರಾಜಕೀಯ ತೀವ್ರತೆಯ ಕೇಂದ್ರಬಿಂದು ಎಂಬಂತೆ ಬದಲಾವಣೆಯಾಗಿದೆ. ನಗರದ ಕನಕ ವೃತ್ತದ ಬಳಿ ಇರುವ ಕಾಂಗ್ರೆಸ್ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಅನಿರೀಕ್ಷಿತವಾಗಿ ರಾತ್ರಿ ವೇಳೆ ಕಚೇರಿಗೆ ಬಂದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ನಂತರ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾದರೆಂದು ಪ್ರಾಥಮಿಕ ಮಾಹಿತಿಯಿದೆ. ಈ ಕೃತ್ಯದಿಂದ ಕಚೇರಿಯಲ್ಲಿದ್ದ ಸೋಫಾ, ಎಸಿ ಸೇರಿದಂತೆ ಹಲವಾರು ವಸ್ತುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಸಂಜೆ ಕನಕ ಕೂಡ ಕಚೇರಿಯಿಂದ ಹೊತ್ತಿ ಉರಿದ ವಸ್ತುಗಳ ಬುರಡಿನ ವಾಸನೆ ಇರುವಂತಿದ್ದು, ಘಟನೆಯ ಗಂಭೀರತೆಯನ್ನು ತೋರಿಸುತ್ತದೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಡಾಗ್ ಸ್ಕ್ವಾಡ್ ಹಾಗೂ ಬೆರಳಚ್ಚು ತಜ್ಞರ ತಂಡವನ್ನೂ ಪರಿಶೀಲನೆಗೆ ಕರೆಯಲಾಗಿದೆ.
ಘಟನೆಯ ಹಿಂದೆ ಯಾರ ಕೈವಾಡವಿದೆ? ಈ ದಾಳಿ ಯಾಕೆ ನಡೆಯಿತು? ಯಾರಿಗೆ ಇದರಿಂದ ಲಾಭವಾಗುತ್ತೆ? ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಘಟನೆಯ ಬಗ್ಗೆ ಸ್ಥಳೀಯ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಶೀಘ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…