ಹರಿಹರ: ನಗರದ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ನಡೆಯುತ್ತಿರುವ ಚರಂಡಿ ನಿರ್ಮಾಣ ಕಾಮಗಾರಿಯನ್ನು ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಪಿ. ಹರೀಶ್ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದ ಶಾಸಕರು, ಕಾಮಗಾರಿ ಪೂರ್ಣಗೊಳ್ಳುವ ಅವಧಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಗುಣಮಟ್ಟವನ್ನು ಕಾಯ್ದುಕೊಂಡು ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಹಾಗೂ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಹರಿಹರ ನಗರಸಭೆಯ ಪೌರಾಯುಕ್ತೆ ಈರಮ್ಮ, ನಗರಸಭೆಯ ಎಇಇ ವಿನಯ್, ಎಇ ಪ್ರಕಾಶ್, ಮುಖಂಡರಾದ ಬಾತಿ ಚಂದ್ರಶೇಖರ್, ರಾಜು ರೋಕಡೆ, ಭರತ್ ಶೆಟ್ಟಿ, ರಾಜು, ಕಿರಣ್ ಬೊಂಗಾಳೆ, ಲೋಹಿತ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…