ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್ ಬಳಸುತ್ತಿದ್ದ ಆರೋಪ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.
ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಸಿದ ತಪಾಸಣೆ ವೇಳೆ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಆ್ಯಂಡ್ರಾಯ್ಡ್ ಮೊಬೈಲ್ ಫೋನ್ ಪತ್ತೆಯಾಗಿದೆ ಎನ್ನಲಾಗಿದೆ. ಮತ್ತಷ್ಟು ಆಘಾತಕಾರಿ ವಿಚಾರವೆಂದರೆ, ಆ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳು ಕೂಡ ಪತ್ತೆಯಾಗಿವೆ ಎಂಬ ಮಾಹಿತಿ ಹೊರಬಿದ್ದಿದೆ.
ಪ್ರಜ್ವಲ್ ರೇವಣ್ಣ ವಿಚಾರಣಾಧೀನ ಕೈದಿಯಲ್ಲ, ಸಜಾ ಬಂಧಿಯಾಗಿದ್ದರೂ ಜೈಲಿನ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಸಿದ್ದು ಹೇಗೆ ಎಂಬ ಪ್ರಶ್ನೆ ಇದೀಗ ಎದ್ದಿದೆ. ಜೊತೆಗೆ, ಜೈಲು ನಿಯಮದಂತೆ ಸಮವಸ್ತ್ರ ಧರಿಸಬೇಕಿದ್ದರೂ ಅವರು ಸಾಮಾನ್ಯ ಬಟ್ಟೆ ಧರಿಸುತ್ತಿದ್ದರು ಎಂದು ಜೈಲು ಡಿಜಿಪಿ ಅಲೋಕ್ ಕುಮಾರ್ ಹೇಳಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಇದರ ನಡುವೆ, ಜೈಲಿನೊಳಗೆ ಪ್ರಜ್ವಲ್ ರೇವಣ್ಣ ಬಣ್ಣಬಣ್ಣದ ಬಟ್ಟೆ ಧರಿಸಿ ಯಾರೊಂದಿಗೋ ಮೊಬೈಲ್‌ನಲ್ಲಿ ಮಾತನಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ದೃಶ್ಯವೂ ಜೈಲಿನ ಭದ್ರತೆ ಹಾಗೂ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಸಾಮಾನ್ಯ ಕೈದಿಗಳಿಗೆ ಜೈಲಿನ ನಿಯಮಗಳು ಕಟ್ಟುನಿಟ್ಟಾಗಿ ಅನ್ವಯವಾಗುತ್ತಿರುವಾಗ, ಸಜಾ ಬಂಧಿಯಾಗಿರುವ ವ್ಯಕ್ತಿಯೊಬ್ಬನಿಗೆ ಮೊಬೈಲ್ ಸೇರಿದಂತೆ ಇಂತಹ ಸೌಲಭ್ಯಗಳು ಹೇಗೆ ದೊರಕಿದವು ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಪ್ರಜ್ವಲ್ ರೇವಣ್ಣಗೆ ಇಂತಹ ಸೌಲಭ್ಯಗಳು ದೊರೆಯಲು ಜೈಲಿನೊಳಗಿಂದ ಯಾರಾದರೂ ಸಹಾಯ ಮಾಡಿದ್ದಾರೆಯೇ? ಮೊಬೈಲ್ ಜೈಲಿಗೆ ಹೇಗೆ ಪ್ರವೇಶಿಸಿತು? ಈ ನಿಯಮ ಉಲ್ಲಂಘನೆಗೆ ಹೊಣೆ ಯಾರು? ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರ ನೀಡಬೇಕಿದೆ. ಪ್ರಕರಣದ ಸಂಪೂರ್ಣ ತನಿಖೆ ನಡೆದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…