ಹಳಿಯಾಳ (ಉತ್ತರ ಕನ್ನಡ): ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಹುದ್ದೆ ಪಡೆಯಲು ಲಂಚದ ವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಮೂವರು ಪಿಎಸ್‌ಐಗಳನ್ನು ಅಮಾನತುಗೊಳಿಸಲಾಗಿದೆ.
ಪಿಎಸ್‌ಐಗಳಾದ ಕಿರಣ್ ಪಾಟೀಲ್, ಕೃಷ್ಣ ಅರಗೇರಿ ಹಾಗೂ ವಿನೋದ್ ರೆಡ್ಡಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ಆದೇಶ ಹೊರಡಿಸಿದ್ದಾರೆ.
ಮೂವರೂ ಸ್ನೇಹಿತರಾಗಿದ್ದು, ಹಳಿಯಾಳ ಪಿಎಸ್‌ಐ ಹುದ್ದೆ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ವಿಚಾರಗಳ ಕುರಿತು ಚರ್ಚಿಸಿರುವ ಸುಮಾರು ಎರಡು ನಿಮಿಷಗಳ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ ಎನ್ನಲಾಗಿದೆ. ಆಡಿಯೋದಲ್ಲಿ ಹುದ್ದೆ ಪಡೆಯಲು ಹಣದ ವ್ಯವಹಾರ ನಡೆದಿರುವ ಕುರಿತು ಚರ್ಚೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಆಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ, ಮೂವರು ಪಿಎಸ್‌ಐಗಳ ವಿರುದ್ಧ ಕ್ರಮ ಕೈಗೊಂಡಿದೆ. ಜೊತೆಗೆ ಪ್ರಕರಣದ ಕುರಿತು ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ.
ವೈರಲ್ ಆಗಿರುವ ಆಡಿಯೋ ನೈಜವೇ? ಅದರಲ್ಲಿ ಕೇಳಿಬರುವ ಆರೋಪಗಳಿಗೆ ಎಷ್ಟು ಸತ್ಯಾಸತ್ಯತೆ ಇದೆ? ಹುದ್ದೆಗಾಗಿ ನಿಜವಾಗಿಯೂ ಲಂಚದ ವ್ಯವಹಾರ ನಡೆದಿತ್ತೇ ಎಂಬುದರ ಬಗ್ಗೆ ಇಲಾಖಾ ತನಿಖೆಯ ಬಳಿಕವಷ್ಟೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…