Categories: JobsLatestPolitics

ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 1500ಕ್ಕೂ ಹೆಚ್ಚು ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರು ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಮತ್ತು ಮೂತ್ರ ಪರೀಕ್ಷೆಗಳಿಗಾಗಿ ಅಗತ್ಯವಿರುವ ಲ್ಯಾಬ್ ವ್ಯವಸ್ಥೆಗಳಿದ್ದರೂ, ತಂತ್ರಜ್ಞರ ಕೊರತೆ ಇರುವುದನ್ನು ಒತ್ತಿ ಹೇಳಿದರು.

ಈ ಹಿನ್ನೆಲೆ, ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡಲಿದೆ ಎಂದು ಸ್ಪಷ್ಟಪಡಿಸಿದರು. ಜೊತೆಗೆ, ಪ್ರಯೋಗಾಲಯಗಳಲ್ಲಿ ಕೆಲಸ ಮಾಡುವ ತಂತ್ರಜ್ಞರ ವೇತನವನ್ನು ಕಾರ್ಮಿಕ ನಿಯಮಾವಳಿಗಳಿಗೆ ಅನುಗುಣವಾಗಿ ಪ್ರಸ್ತುತ ಇರುವ ₹18,225ರಿಂದ ₹25,000ರವರೆಗೆ ಹೆಚ್ಚಿಸುವ ಬಗ್ಗೆ ಗಮನ ಹರಿಸಲಾಗುವುದು ಎಂದರು.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

1 day ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

1 day ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago