Crime

ಮಗನ ಕ್ರೌರ್ಯಕ್ಕೆ ತಾಯಿಯ ಬಲಿ.!: ಗಾಜಿನಿಂದ ಇರಿದು ಭೀಕರ ಹತ್ಯೆ

ಹುಬ್ಬಳ್ಳಿಯ ತೊರವಿ ಹಕ್ಕಲ ಪ್ರದೇಶದಲ್ಲಿ ತಾಯಿಯೊಬ್ಬರು ತನ್ನ ಮಗನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಕಾರಣದ ಮೇಲೆ ಮಗನಿಂದಲೇ ಹತ್ಯೆಗೀಡಾದ ಭೀಕರ ಘಟನೆ ನಡೆದಿದೆ. ಈ ದುರ್ಘಟನೆ ಗುರುವಾರ ತಡರಾತ್ರಿ ಕಮರಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

46 ವರ್ಷದ ಪದ್ಮಾ ಎಂಬ ಮಹಿಳೆ ಗಂಡ ಶ್ರೀನಿವಾಸ ಹಾಗೂ ಇಬ್ಬರು ಗಂಡು ಮಕ್ಕಳೊಂದಿಗೆ ವಾಸವಾಗುತ್ತಿದ್ದಳು. ಪದ್ಮಾಳ ಮೊದಲ ಮಗ ಮಂಜುನಾಥ್, ಈಗಾಗಲೇ ವಿವಾಹವಾದವನಾಗಿದ್ದರೂ, ಮತ್ತೊಬ್ಬ ಯುವತಿಯ ಜೊತೆ ಅನೈತಿಕ ಸಂಬಂಧವನ್ನು ಹೊಂದಿದ್ದ. ಇದನ್ನು ತಿಳಿದ ತಾಯಿ ಪದ್ಮಾ, ಮಗನಿಗೆ ನಿಷ್ಠುರ ಸಲಹೆ ನೀಡಲು ಮುಂದಾಗಿ, “ಮಗನೆ, ನಿನಗೆ ಹೆಂಡತಿಯಿದ್ದರೂ ಬೇರೆ ಯುವತಿಯ ಜೊತೆ ಇರುವಂತದು ತಪ್ಪು, ನೀನು ಉತ್ತಮ ವ್ಯಕ್ತಿಯಾಗಿ ಬದುಕು” ಎಂದು ಬುದ್ಧಿವಾದ ಹೇಳಲು ಯತ್ನಿಸಿದ್ದಳು.

ಆದರೆ ಈ ಮಾತು ಮಂಜುನಾಥನಿಗೆ ಅಷ್ಟೆಂದರೆ ಬೇಸರವಾಯಿತು. ತಾಯಿಯ ಮಾತಿಗೆ ಕೋಪಗೊಂಡ ಮಂಜು, ತಾಯಿ ಜೊತೆ ಜಗಳ ಆರಂಭಿಸಿದ. ಈ ವೇಳೆ ಪದ್ಮಾಳ ಗಂಡ ಶ್ರೀನಿವಾಸ ಮತ್ತು ಮತ್ತೊಬ್ಬ ಮಗ ಲಕ್ಷ್ಮಣ್ ಮಧ್ಯಪ್ರವೇಶಿಸಿ ಜಗಳ ತಡೆಯಲು ಯತ್ನಿಸಿದರು. ಮಾತಿಗೆ ಮಾತು ಬೆಳೆದ ಪರಿಣಾಮ, ಕೋಪಗೊಂಡ ಮಂಜುನಾಥ್ ತಮ್ಮ ಸಹೋದರ ಲಕ್ಷ್ಮಣ್ ಮೇಲೆ ಕಿಟಕಿಯ ಗಾಜು ಬಳಸಿಕೊಂಡು ಹಲ್ಲೆ ಮಾಡಲು ಮುಂದಾಗಿದ್ದ. ಈ ಕ್ಷಣದಲ್ಲಿ ಇಬ್ಬರ ನಡುವೆ ನಡೆಯುತ್ತಿದ್ದ ಜಗಳ ತಡೆಯಲು ಪದ್ಮಾ ಮುಂದಾಗಿದ್ದಾಗ, ಮಂಜುನಾಥ್ ಆಕೆಯ ಬೆನ್ನಿನ ಭಾಗಕ್ಕೆ ಗಾಜಿನಿಂದ ಇರಿದಿದ್ದಾನೆ.

ಈ ಆಕ್ರಮಣದಿಂದ ಗಂಭೀರವಾಗಿ ಗಾಯಗೊಂಡ ಪದ್ಮಾಳನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಶುಕ್ರವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಪದ್ಮಾ ಮರಣ ಹೊಂದಿದಳು.

ಘಟನೆ ಬಗ್ಗೆ ಮಾಹಿತಿ ತಿಳಿದ ಕಮರಿಪೇಟೆ ಠಾಣಾ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಡುವೆ, ಆರೋಪಿಯಾದ ಮಂಜುನಾಥ್ ಅನ್ನು ಪೊಲೀಸರು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ಇಡೀ ಘಟನೆಯಿಂದ ತೊರವಿ ಹಕ್ಕಲ ಪ್ರದೇಶದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಹೆಚ್ಚಿನ ಭದ್ರತೆ ಕೈಗೊಂಡಿದ್ದಾರೆ. ವರದಿ: ಶಿವು ಪಿ.ಆರ್.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

12 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago