Latest

ಮಗು ಬಿಟ್ಟು ತಾಯಿ ಪರಾರಿ – ರಸ್ತೆಯ ಪಕ್ಕದಲ್ಲಿ ಪತ್ತೆಯಾದ ನವಜಾತ ಶಿಶು!

ಚಾಮರಾಜನಗರ, ಜುಲೈ 20: ತಾಯಿಯೊಬ್ಬಳು ಹದಿನೈದು ದಿನಗಳ ನವಜಾತ ಹೆಣ್ಣು ಮಗುವನ್ನು ರಸ್ತೆಯಲ್ಲಿ ಬಿಟ್ಟು ಪರಾರಿಯಾದ ಆಘಾತಕಾರಿ ಘಟನೆ ಚಾಮರಾಜನಗರ ತಾಲ್ಲೂಕಿನ ತಮ್ಮಡಹಳ್ಳಿ ಬಳಿಯ ಸಾಗಡೆ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯರ ಪ್ರಕಾರ, ಮಗು ಹತ್ತರಿಂದ ಹದಿನೈದು ದಿನಗಳ ವಯಸ್ಸಿನದ್ದಾಗಿದ್ದು, ಅದನ್ನು ಪಂಚೆಯಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಟ್ಟಿರುವುದನ್ನು ಗುರುತಿಸಲಾಗಿದೆ. ಕಡುಪಾಪಿಯಾಗಿ ತಾಯಿ ಮಗುವನ್ನು ಬಿಟ್ಟು ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಮಗುವನ್ನು ಗಮನಿಸಿದ ಜನರು ತಕ್ಷಣವೇ ಸಾಗಡೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಈಗ ಶಿಶು ಸುರಕ್ಷಿತವಾಗಿದ್ದು, ಆರೋಗ್ಯ ಸ್ಥಿರವಾಗಿದೆ.

ಈ ಕುರಿತು ಸ್ಥಳೀಯ ಆರೋಗ್ಯ ಇಲಾಖೆ ಹಾಗೂ ಪೊಲೀಸರು ಶಿಶುವಿನ ತಾಯಿಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಗ್ರಾಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

13 hours ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

14 hours ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

14 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

14 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

1 day ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

2 days ago