ಜಾರ್ಖಂಡ್‌ನ ಚಕ್ರಧರಪುರ ರೈಲ್ವೆ ವಿಭಾಗದಲ್ಲಿ ಮನಕಲಕುವ ಘಟನೆ ನಡೆದಿದ್ದು, ತಾಯಿಯೇ ತನ್ನ ಒಂದೂವರೆ ತಿಂಗಳ ಹಸುಗೂಸನ್ನು ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ಹೊರಗೆ ಎಸೆದು ಹತ್ಯೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ರಾಜ್‌ಖರ್ಸವಾನ್ ಮತ್ತು ಮಹಲಿಮ್‌ರೂಪ್ ರೈಲು ನಿಲ್ದಾಣಗಳ ನಡುವಿನ ಮಾರ್ಗದಲ್ಲಿ ಈ ದಾರುಣ ಘಟನೆ ನಡೆದಿದ್ದು, ಮತ್ತೊಂದು ಮಗುವಿನ ಜೀವವನ್ನು ಸಹ ಪ್ರಯಾಣಿಕರು ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ರೈಲಿನಲ್ಲಿ ಎಲ್ಲವೂ ಸಹಜವಾಗಿಯೇ ಸಾಗುತ್ತಿತ್ತು. ಆದರೆ ಏಕಾಏಕಿ ಮಹಿಳೆ ತನ್ನ ಮಡಿಲಲ್ಲಿ ಮಲಗಿದ್ದ ಒಂದೂವರೆ ತಿಂಗಳ ಹಸುಗೂಸನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾಳೆ. ಈ ದೃಶ್ಯ ಕಂಡ ಪ್ರಯಾಣಿಕರು ಬೆಚ್ಚಿಬಿದ್ದಿದ್ದು, ತಕ್ಷಣ ಆಕೆಯನ್ನು ತಡೆಯಲು ಮುಂದಾದರು. ಇದೇ ವೇಳೆ, ತನ್ನ ಮೂರು ವರ್ಷದ ಮತ್ತೊಂದು ಮಗುವನ್ನೂ ಹೊರಗೆ ತಳ್ಳಲು ಮಹಿಳೆ ಯತ್ನಿಸಿದ್ದಾಳೆ. ಆದರೆ ಪ್ರಯಾಣಿಕರು ಆಕೆಯನ್ನು ಹಿಡಿದು ಮಗುವಿನ ಜೀವ ಉಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಳಿಗಳ ಸುತ್ತಮುತ್ತ ಶೋಧ ಕಾರ್ಯ ಆರಂಭಿಸಿದರು. ಸುಮಾರು ಒಂದು ಗಂಟೆ ಕಾಲ ನಡೆಸಿದ ತೀವ್ರ ಹುಡುಕಾಟದ ಬಳಿಕ, ಹಳಿಯ ಪಕ್ಕದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಈ ದೃಶ್ಯ ಕಂಡ ಸ್ಥಳೀಯರು ಹಾಗೂ ಅಧಿಕಾರಿಗಳು ಕಣ್ಣೀರು ಹಾಕಿದರು.
ಬಂಧಿತ ಮಹಿಳೆಯನ್ನು ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಮಜ್‌ಗಾಂವ್ ನಿವಾಸಿ ಮುದ್ರಾವತಿ ಗೋಪೆ ಅಲಿಯಾಸ್ ಹಸೀನಾ ಬೇಗಂ ಎಂದು ಗುರುತಿಸಲಾಗಿದೆ. ಆಕೆಯ ಪತಿ ಪಶ್ಚಿಮ ಬಂಗಾಳ ಮೂಲದ ಶಹಾಬುದ್ದೀನ್ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ನಾಲ್ಕು ವರ್ಷಗಳ ಹಿಂದೆ ಶಹಾಬುದ್ದೀನ್ ಮುದ್ರಾವತಿಯನ್ನು ಅಪಹರಿಸಿದ್ದ ಎನ್ನಲಾಗಿದ್ದು, ಈ ಸಂಬಂಧ ಮಜ್‌ಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಇಬ್ಬರೂ ಮದುವೆಯಾಗಿ ಹೈದರಾಬಾದ್‌ನಲ್ಲಿ ನೆಲೆಸಿದ್ದರು.
ಇತ್ತೀಚೆಗೆ ಕುಟುಂಬದಲ್ಲಿ ತೀವ್ರ ಮಾನಸಿಕ ಒತ್ತಡ ಉಂಟಾಗಿದ್ದ ಹಿನ್ನೆಲೆಯಲ್ಲಿ, ಮಕ್ಕಳೊಂದಿಗೆ ತವರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಚೈಬಾಸಾ ರೈಲ್ವೆ ನಿಲ್ದಾಣದಲ್ಲಿ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
“ಪ್ರಾಥಮಿಕ ತನಿಖೆಯಲ್ಲಿ ಮಹಿಳೆ ತೀವ್ರ ಮಾನಸಿಕ ಅಸ್ಥಿರತೆಯಿಂದ ಬಳಲುತ್ತಿರುವುದು ಕಂಡುಬಂದಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಲಾಗಿದೆ” ಎಂದು ಚೈಬಾಸಾ ರೈಲ್ವೆ ಇನ್ಸ್‌ಪೆಕ್ಟರ್ ಪಿ.ಪಿ. ಸುರಿನ್ ತಿಳಿಸಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…